ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

Must Read

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ ಮುಂದಾಗಲಿ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಡಾ.ಸುನಂದಾ ಶಿರೂರ ಹೇಳಿದರು.

ನಗರದ ಕೆಇಬಿ ಸಭಾಭವನದಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ‘ಕೊಕ್ಕನವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ’, ಪ್ರಶಸ್ತಿ ಪ್ರದಾನ ಹಾಗೂ ಡಾ.ವೈ.ವೈ. ಕೊಕ್ಕನವರ ವಿರಚಿತ ‘ಜಗವೆಲ್ಲ ನಗುತಿರಲಿ’ ಕೃತಿ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಮುಖ್ಯ ಅತಿಥಿಯಾಗಿ ಮಾತನಾಡಿ, ಭಾವನೆಗಳನ್ನು ಕೆರಳಿಸುವ ಸಾಹಿತ್ಯ ರಚಿಸಬಾರದು. ಬದಲಾಗಿ ಭಾವನೆಗಳನ್ನು ಅರಳಿಸುವ ಸಾಹಿತ್ಯ ರಚಿಸಬೇಕು ಎಂದರು.

ಅಥಣಿ ಮೋಟಗಿ ಮಠದ ಡಾ.ಪ್ರಭುಚೆನ್ನಬಸವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ, ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿ, ಇಂದು ಜನರ ಅಭಿರುಚಿ ತಪ್ಪಿದೆ. ಕೇವಲ ಮನರಂಜನೆ ಮೂಲಕ ಸಂಸ್ಕೃತಿಯನ್ನು ಉಳಿಸಲು ಸಾಧ್ಯವಿಲ್ಲ ಎಂದು ಆಶೀರ್ವಚನ ನೀಡಿದರು.

ನಿವೃತ್ತ ಪ್ರಾಚಾರ್ಯ ಡಾ.ಸಂಗಮೇಶ ಮಟೋಳಿ ಸ್ವೀಕರಿಸಿ ಮಾತನಾಡಿ, ಕೊಕ್ಕನವರ ಅಕಾಡೆಮಿಯು ಕನ್ನಡ ನೆಲ-ಜಲ, ಸಾಹಿತ್ಯ-ಭಾಷೆ, ಕನ್ನಡಾಭಿಮಾನ ಬೆಳೆಸುವ ಕಾರ್ಯವನ್ನು ಮಾಡಲಿ ಎಂದರು.

ಡಾ.ಯಶವಂತ ಕೊಕ್ಕನವರ ವಿರಚಿತ ‘ಜಗವೆಲ್ಲ ನಗುತಿರಲಿ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ನಿವೃತ್ತ ಪ್ರಾಚಾರ್ಯ ಡಾ.ವಿ.ಎಸ್. ಮಾಳಿ ಕೃತಿ ಪರಿಚಯಿಸಿದರು. ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಇಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಕ್ಷ್ಮಿ ಖವಾಸಿ ಅವರು ಪ್ರಾರ್ಥಿಸಿದರು. ಡಾ.ರಾಜು ಕೊಕ್ಕನವರ ಸ್ವಾಗತಿಸಿದರು. ಸರಿತಾ ಶಿರಗುಪ್ಪಿ ನಿರೂಪಿಸಿದರು. ಈರಪ್ಪ ಸುತಾರ ವಂದಿಸಿದರು.

LEAVE A REPLY

Please enter your comment!
Please enter your name here

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group