ಬೀದರ್ ಬ್ರೀಮ್ಸ್ ಮೇಲೆ ಲೋಕಾಯಕ್ತ ದಾಳಿ; ಪರಿಶೀಲನೆ

Must Read

ಬೀದರ: ಸಾರ್ವಜನಿಕರಿಂದ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯಕ್ತ ಅಧಿಕಾರಿಗಳ ತಂಡವು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ರೋಗಿಗಳಿಗೆ ಔಷಧಿ ಹಾಗೂ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಬಂದ ಹಿನ್ನಲೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

 

ಔಷಧಿಗಳು ಹಾಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಬ್ರೀಮ್ಸ್ ನಲ್ಲಿ‌ ಕೆಲಸ ಮಾಡುವ ಅಧಿಕಾರಿಗಳನ್ನು ಪ್ರಶ್ನೆ ಮಾಡಿ ಮಾಹಿತಿ ಪಡೆದರು. ಬ್ರೀಮ್ಸ್ ನ ಔಷಧಿ ಗೋಡೌನ್ ಗೆ ಲೋಕಾಯಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಲೋಕಾಯಕ್ತ ಡಿವೈಎಸ್ಪಿ ಎನ್ ಎಂ ಓಲೇಕಾರ್ ಮಾರ್ಗದರ್ಶನದಲ್ಲಿ ಈ ದಾಳಿ ನಡೆಸಲಾಯಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group