- Advertisement -
ಬೀದರ್ ನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೀದರ – ಅಕ್ರಮ ಆಸ್ತಿ ಗಳಿಕೆ ಆರೋಪಗಳು ಬಂದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಎರಡು ಕಡೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಮುಟ್ಟಿಸಿದ್ದಾರೆ. ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸದ ಮೇಲೆ ದಾಳಿ. ಬೀದರ್ ನ ಗುಂಪಾ ನಿವಾಸದ ಮೇಲೆ ಹಾಗೂ ಜಿಲ್ಲಾ ತರಬೇತಿ ಕಚೇರಿ ಮೇಲೆ ದಾಳಿ ಹಾಗೂ ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೆದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್ ಪಿ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.
- Advertisement -
ವರದಿ : ನಂದಕುಮಾರ ಕರಂಜೆ, ಬೀದರ