ಬೀದರ : ಗಡಿ ಜಿಲ್ಲೆ ಬೀದರ ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೆಂಗಳೂರು ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ ವೈಜನಾಥ್ ಸಹೋದರ ನಾಗನಾಥ್ ಹಾಲಿಂಗೆ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ ಲೋಕಾಯುಕ್ತಾ ಪೊಲೀಸ್ ಅಧಿಕಾರಿಗಳಿಂದ ದಾಳಿ ನಡೆಸಿ ಬೀದರ್ ನಗರದ ಸಾಹೇಬ್ ನಗರ, ಭಾಲ್ಕಿಯ ನಿವಾಸ ಹಾಗೂ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ಕೂಡಾ ದಾಳಿ ಮಾಡಿದರು.
ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತಾ ಪೊಲೀಸರಿಂದ ದಾಳಿ ನಡೆಸಿದ್ದು ಬೀದರ ನಲ್ಲಿರುವ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ವರದಿ : ನಂದಕುಮಾರ ಕರಂಜೆ, ಬೀದರ