spot_img
spot_img

M K Indira Information in Kannada- ಸ್ತ್ರೀ ಜಾಗೃತಿ ಬರಹಗಾರ್ತಿ ಎಂ ಕೆ ಇಂದಿರಾ

Must Read

ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯರ ಗೋಳು, ಜಾತಿ ಪದ್ದತಿ ಹೀಗೆ ಸಮಾಜದಲ್ಲಿನ ಸಮಸ್ಯೆಗಳ ಮೇಲೆ ತಮ್ಮ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದ ಕನ್ನಡದ ಹೆಸರಾಂತ ಲೇಖಕಿ ಎಂ.ಕೆ. ಇಂದಿರಾ ಅವರ ಜನ್ಮದಿನವಿಂದು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ಧ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ 2ನೇಯ ತರಗತಿವರೆಗೆ ಮಾತ್ರ. ತಮ್ಮ 12 ನೆ ವರ್ಷಕ್ಕೆ ಮದುವೆಯಾಯಿತು.

ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು, ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ “ತುಂಗಭದ್ರ”. “ತುಂಗಭದ್ರೆ”ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು. ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ತರಗತಿಗೆ ಪಠ್ಯವಾಗಿತ್ತು.

ನಂತರ “ಗೆಜ್ಜೆಪೂಜೆ”, “ಸದಾನಂದ”, “ನವರತ್ನ” ಹೀಗೆ ಹಲವಾರು ಕೃತಿಗಳು ಪ್ರಕಟವಾದವು. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು. ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.

ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳು, ಹನ್ನೊಂದು ಕಥಾಸಂಕಲಗಳನ್ನು ಬರೆದಿದ್ದಾರೆ. “ಬಿಂದು” ಅರ್ಧಕ್ಕೇ ನಿಂತುಹೋದ ಆತ್ಮಕಥೆ. ಇವರು ಬರೆದ “ಗೆಜ್ಜೆ ಪೂಜೆ” ಕೃತಿಯ ಚಿತ್ರದ ಚಿತ್ರಕಥೆಗಾಗಿ ನಿರ್ದೇಶಕ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರಿಗೆ ಅತ್ಯುತ್ತಮ ಚಿತ್ರಕಥೆಗಾರ ಪ್ರಶಸ್ತಿ ಪ್ರಕಟವಾದಾಗ ಮೂಲ ಕಾದಂಬರಿಕಾರ್ತಿ ಎಂ.ಕೆ.ಇಂದಿರಾ ಈ ಪ್ರಶಸ್ತಿ ಸಲ್ಲಬೇಕಾಗಿರುವುದು ಮೂಲ ಲೇಖಕಿಗೆ ಎನ್ನುವ ವಾದ ಮಂಡಿಸಿದ್ದರು. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸಾವಿತ್ರಮ್ಮ ದೇಜಗೌ ಪ್ರಶಸ್ತಿ, ಸುರಗಿ ಅಭಿನಂದನಾ ಗ್ರಂಥ ಸಮರ್ಪಣೆ ಸೇರಿದಂತೆ ಹಲವಾರು ಗೌರವ, ಪ್ರಶಸ್ತಿಗಳು ಸಂದಿವೆ.

ಎಂ. ಕೆ. ಇಂದಿರಾ 1994, ಮಾರ್ಚ್‌ 14ರಂದು ತೀರಿಕೊಂಡರು.
ಇಂತಹ ಮಹಾನ್ ಚೇತನಕ್ಕೆ ಸಮಸ್ತ ಕರ್ನಾಟಕ ಶಿಕ್ಷಕರ ಬಳಗ ದ ವತಿಯಿಂದ ಹಾರ್ದಿಕ ಅಭಿನಂದನೆಗಳು.


ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ಪ್ರೇಮ ಕವಿಯ ಮನೆ ಪುನಶ್ಚೆತನಕ್ಕೆ ಮನವಿ

ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಬಾಲ್ಯದ ಮನೆ ಶಿಥಿಲಾವಸ್ಥೆಯಲ್ಲಿದ್ದು, ಮನೆಯನ್ನು ಶೀಘ್ರವಾಗಿ ದುರಸ್ಥಿಗೊಳಿಸಿ ಕೆ.ಎಸ್.ನ.ಸ್ಮಾರಕ ಮಾಡಲು ಮನವಿ. ಕೆ.ಎಸ್.ನರಸಿಂಹಸ್ವಾಮಿ ಅವರು ಕನ್ನಡ ಕಾವ್ಯ ಲೋಕದ ಹಿರಿಯ ಕವಿ. ತಮ್ಮ...
- Advertisement -

More Articles Like This

- Advertisement -
close
error: Content is protected !!