- Advertisement -
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರತಿಷ್ಠಿತ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಶಿವಗೌಡ ಬಸಗೌಡ ಪಾಟೀಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಮನರಂಜನಾ ಕಾರ್ಯಕ್ರಮ “ಮಹಾ ಚೈತ್ರ” ಇದೇ ತಿಂಗಳ 6 ರಿಂದ 7ರವರೆಗೆ ಸಾಯಂಕಾಲ 6 ಗಂಟೆಗೆ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಚೇರಮನ್ನರಾದ ಬಸಗೌಡ ಪಾಟೀಲ ವಹಿಸಲಿದ್ದಾರೆ.
ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಎಸ್. ಸೀತಾರಾಮು ಮುಖ್ಯ ಅತಿಗಳಾಗಿ ಆಗಮಿಸಲಿದ್ದಾರೆ. ಸಂಸ್ಥೆಯ ಸರ್ವ ಆಡಳಿತ ಮಂಡಳಿ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಡಾ. ಸುರೇಶ ಹನಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.