spot_img
spot_img

ಶಿವ ಪಾರ್ವತಿ ವಿವಾಹದ ದಿನ ಮಹಾ ಶಿವರಾತ್ರಿ

Must Read

- Advertisement -

🌹ಹಿಂದೂ ಧರ್ಮದಲ್ಲಿ ಶಿವರಾತ್ರಿಗೆ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ.

ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ ಉಪವಾಸ ಕೈಗೊಳ್ಳುತ್ತಾರೆ. ಅಲ್ಲದೆ, ಉಪವಾಸವು ಹಗಲಿನಿಂದ ಪ್ರಾರಂಭಗೊಂಡು ರಾತ್ರಿ ಪೂರ್ತಿ ನಡೆದು ಮರುದಿನ ಪ್ರಾತಃ ಕಾಲಕ್ಕೆ ಕೊನೆಗೊಳ್ಳುತ್ತದೆ. ವ್ರತದ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು. ವ್ರತಾಧಾರಿಯು ಹಣ್ಣಿನ ರಸ, ಹಣ್ಣುಗಳು ಮತ್ತು ವಿಶೇಷ ವ್ರತ ಆಹಾರಗಳಾದ ವ್ರತದ ಅನ್ನ, ಬೀಜಗಳು, ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಪದಾರ್ಥಗಳನ್ನು ಸೇವಿಸಬಹುದು. ಸೂರ್ಯಾಸ್ತದ ನಂತರವಷ್ಟೇ ಊಟವನ್ನು ಸೇವಿಸಬೇಕು.

ಮರುದಿನ ಮುಂಜಾನೆ ಲಿಂಗಕ್ಕೆ ಅಭಿಷೇಕವನ್ನು ಪೂರೈಸಿ ಪ್ರಾರ್ಥನೆಗಳನ್ನು ಸಲ್ಲಿಸಿದ ನಂತರವಷ್ಟೇ ವ್ರತವನ್ನು ಸಂಪನ್ನಗೊಳಿಸಬೇಕು. ವ್ರತ ಸಂಪನ್ನಗೊಳಿಸುವಾಗ ಪ್ರಸಾದ ಇಲ್ಲವೇ, ಶಿವನಿಗೆ ಅರ್ಪಿಸಿದ ಆಹಾರವನ್ನು ಮೊದಲು ತೆಗೆದುಕೊಳ್ಳಬೇಕು.

- Advertisement -

ಶಿವರಾತ್ರಿ ಏಕೆ ಅತಿ ಮಹತ್ವದ್ದು ಮತ್ತು ಪವಿತ್ರವಾದುದು ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳಬಹುದಾಗಿದೆ….

🌹ಬ್ರಹ್ಮ ಮತ್ತು ವಿಷ್ಣುವಿಗೆ ಸಂಬಂಧಿಸಿದ ಕಥೆ.

ಹೆಚ್ಚು ಜನಜನಿತವಾಗಿರುವ ಶಿವರಾತ್ರಿಯ ಕಥೆಯು ಬ್ರಹ್ಮ ಮತ್ತು ವಿಷ್ಣುವಿಗೆ ಸಂಬಂಧಿಸಿದ್ದಾಗಿದೆ. ತಮ್ಮಲ್ಲಿ ಯಾರು ಶ್ರೇಷ್ಠರು ಎಂಬುದಾಗಿ ಇಬ್ಬರಲ್ಲಿ ಸಂಘರ್ಷ ನಡೆಯುತ್ತಿತ್ತು. ಈ ರೀತಿ ಜಗಳ ಮುಂದುವರಿಯುತ್ತಿದ್ದರೆ ಇದು ವಿನಾಶಕ್ಕೆ ಕಾರಣವಾಗಬಹುದು ಎಂದು ಭಾವಿಸಿದ ದೇವತೆಗಳು ಬ್ರಹ್ಮ ಮತ್ತು ವಿಷ್ಣುವಿನ ವಿರಸದ ಕುರಿತಾಗಿ ಶಿವನಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಇಬ್ಬರು ದೇವರನ್ನು ಸಂತೈಸಲು ಶಿವ ಆಗಮಿಸುತ್ತಾರೆ.

- Advertisement -

ಶಿವನು ಬೆಂಕಿಯಿಂದ ಕೂಡಿದ ಲಿಂಗಧಾರಣೆಯನ್ನು ಮಾಡಿಕೊಂಡು ಲಿಂಗದ ಮೇಲ್ಭಾಗ ಮತ್ತು ತಳಭಾಗವನ್ನು ಹೋಗಿ ಸ್ಪರ್ಶಿಸಿದರೆ ಯಾರು ಶ್ರೇಷ್ಠರು ಎಂಬುದನ್ನು ನೋಡಲು ಇಬ್ಬರಲ್ಲೂ ತಿಳಿಸುತ್ತಾರೆ. ಬ್ರಹ್ಮನು ಬಾತುಕೋಳಿಯ ರೂಪದಲ್ಲಿ ಮೇಲ್ಭಾಗಕ್ಕೂ ವಿಷ್ಣುವು ಹಂದಿಯ ರೂಪದಲ್ಲಿ ಲಿಂಗದ ಕೆಳಭಾಗವನ್ನು ಗುರುತಿಸಲು ಮುಂದಾಗುತ್ತಾರೆ. ಆದರೆ ಇವರಿಬ್ಬರಿಗೂ ಕೊನೆ ಮತ್ತು ಆರಂಭ ದೊರೆಯುವುದೇ ಇಲ್ಲ.

ಸ್ಪರ್ಧೆಯಲ್ಲಿ ಸೋಲಲು ಇಷ್ಟಪಡದ ಬ್ರಹ್ಮನು ಕೇತಕಿ ಪುಷ್ಪವನ್ನು ತೆಗೆದುಕೊಂಡು ಬಂದು ಬೆಂಕಿಯ ಮೇಲ್ಭಾಗದಲ್ಲಿ ಇದು ದೊರಕಿತು ಎಂದಾಗಿ ಸುಳ್ಳು ಹೇಳುತ್ತಾರೆ. ಕೇತಕಿ ಪುಷ್ಪ ಕೂಡ ಬ್ರಹ್ಮನನ್ನು ಬೆಂಬಲಿಸುತ್ತದೆ. ಇದರಿಂದ ಕೋಪಗೊಂಡ ಶಿವನು ಬ್ರಹ್ಮನು ಸುಳ್ಳು ಹೇಳಿದ್ದಕ್ಕಾಗಿ ಬ್ರಹ್ಮನನ್ನು ಯಾರೂ ಪೂಜಿಸಬಾರದು ಎಂದಾಗಿ ಶಪಿಸುತ್ತಾರೆ. ಅಂತೆಯೇ ಪೂಜೆ ಸಮಯದಲ್ಲಿ ಕೇತಕಿ ಹೂವನ್ನು ಯಾರೂ ಬಳಸಬಾರದು ಎಂಬುದಾಗಿ ಶಾಪವನ್ನೀಯುತ್ತಾರೆ. ಇದು ಇಂದಿಗೂ ಚಾಲ್ತಿಯಲ್ಲಿದೆ.

🌹ಮಹಾಶಿವರಾತ್ರಿ ಹಬ್ಬದ ಮಹತ್ವ.

ಮಹಾಶಿವರಾತ್ರಿಯ ಮಧ್ಯರಾತ್ರಿಯಂದು ಮಹಾದೇವನು ಲಿಂಗ ಸ್ವರೂಪವನ್ನು ಧರಿಸುತ್ತಾರೆ. ಫಲ್ಗುಣ ಮಾಸದ 14 ನೇ ಗಾಢ ಮಾಸದಂದು ಇದು ಸಂಭವಿಸುತ್ತದೆ. ಶಿವನು ಪ್ರಥಮ ಬಾರಿ ಲಿಂಗ ರೂಪವನ್ನು ಧರಿಸುವುದು ಎಂಬುದಾಗಿ ಇದನ್ನು ಕಾಣಲಾಗುತ್ತದೆ. ಆ ದಿನವನ್ನೇ ಮಹಾಶಿವರಾತ್ರಿಯಾಗಿ ಆಚರಿಸಲಾಗುತ್ತದೆ. ಈ ದಿನದಂದು ಶಿವನನ್ನು ಪೂಜಿಸುವುದು ಸಕಲ ಇಷ್ಟಾರ್ಥಗಳನ್ನು ನೆರವೇರಿಸಲಿದೆ ಮತ್ತು ಸುಖ ಸಂತೋಷವನ್ನು ತರಲಿದೆ ಎಂಬುದು ಪ್ರತೀತಿಯಾಗಿದೆ.

🌹ಬುಡಕಟ್ಟು ಜನಾಂಗದ ಮನುಷ್ಯನ ಕಥೆ.

ಬುಡಕಟ್ಟು ಜನಾಂಗದ ಬಡವನು ಶಿವ ಭಕ್ತನನ್ನು ಆಧರಿಸಿದ ಇನ್ನೊಂದು ಕಥೆಯಿದೆ. ರಾತ್ರಿ ವೇಳೆಯಲ್ಲಿ ಒಮ್ಮೆ ಆತನು ದಾರಿ ತಪ್ಪುತ್ತಾನೆ. ಕಾಡುಪ್ರಾಣಿಗಳ ಧ್ವನಿಯನ್ನು ಕೇಳಿ ಭಯದಿಂದ ಮರವನ್ನೇರಿ ಈತ ಕುಳಿತುಕೊಳ್ಳುತ್ತಾನೆ. ತಾನು ಮಲಗಿದ ಸಂದರ್ಭದಲ್ಲಿ ಪ್ರಾಣಿಗಳು ತನ್ನ ಮೇಲೆ ದಾಳಿ ನಡೆಸಿದರೆ ಎಂದು ಹೆದರಿ ಆತ ರಾತ್ರಿಯಿಡೀ ಎಚ್ಚರಗೊಂಡಿರುತ್ತಾನೆ. ಶಿವನ ಸ್ಮರಣೆಯನ್ನು ಮಾಡುತ್ತಿರುತ್ತಾನೆ. ಬೆಳಗ್ಗಿನ ಜಾವ ನೋಡಿದಾಗ ಶಿವಲಿಂಗದ ಮೇಲೆ ಎಲೆಗಳು ಬೀಳುತ್ತಿರುವುದನ್ನು ನೋಡುತ್ತಾನೆ. ಆತ ರಾತ್ರಿಯೆಲ್ಲಾ ಶಿವನ ನಾಮ ಸ್ಮರಣೆ ಮಾಡುತ್ತಿದ್ದುದನ್ನು ಶಿವನು ಮೆಚ್ಚಿಕೊಂಡನು ಮತ್ತು ಆ ಬಡವನು ಶಿವನ ಕೃಪಾಕಟಾಕ್ಷಕ್ಕೆ ಒಳಗಾಗಿರುತ್ತಾನೆ.

🌹 ಶಿವರಾತ್ರಿ ಹಬ್ಬಕ್ಕೆ ಸಂಬಂಧಿಸಿದಂತೆ ಜನರು ಹೆಚ್ಚಿನ ಕಥೆಗಳನ್ನು ಹೇಳುತ್ತಿರುತ್ತಾರೆ. ಈ ದಿನವೇ ಶಿವನು ತಾಂಡವ ನೃತ್ಯವನ್ನು ಆಡಿದ್ದು ಮತ್ತು ಪಾರ್ವತಿ ದೇವಿಯನ್ನು ವರಿಸಿರುವುದು ಎಂಬುದಾಗಿ ಕೂಡ ಪುರಾಣಗಳಲ್ಲಿ ಉಲ್ಲೇಖಗೊಂಡಿದೆ. ಅದಾಗ್ಯೂ ಶಿವರಾತ್ರಿಯನ್ನು ದೇಶದೆಲ್ಲೆಡೆ ಒಂದೇ ದಿನ ಸಂಭ್ರಮದಿಂದ ಆಚರಿಸಲಾಗುತ್ತದೆ. ದೇವರ ಹೆಸರಿನಲ್ಲಿ ಜಾಗರಣೆ ಮಾಡಿ ವ್ರತಗಳನ್ನು ಈ ದಿನ ನಡೆಸಲಾಗುತ್ತದೆ…


ಹೇಮಂತ ಚಿನ್ನು

ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group