spot_img
spot_img

ಮಹಾದಾಯಿ, ಕೃಷ್ಣಾ ಯೋಜನೆಗೆ ವಿಳಂಬ; ಕಾಂಗ್ರೆಸ್ ಪ್ರತಿಭಟನೆ

Must Read

- Advertisement -

ಸಿಂದಗಿ: ಉತ್ತರ ಕರ್ನಾಟಕ ಭಾಗಕ್ಕೆ ಬಹುಮುಖ್ಯವಾದ ಮಹಾದಾಯಿ ಹಾಗೂ ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯ ಪ್ರತಿಭಟನೆ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಬೃಹತ್ ಪ್ರತಿಭಟನೆಯ ಕೃಷ್ಣಾ ಯೋಜನೆಯ ಸಮಾವೇಶವನ್ನು ಇದೇ 30 ರಂದು ಮಧ್ಯಾಹ್ನ 3.00 ಗಂಟೆಗೆ ವಿಜಯಪುರ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ  ಕಾರಣ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಎಲ್ಲ ಸೆಲ್ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ವಿನಂತಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ರವರು ಹಾಗೂ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ರವರು, ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ರವರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದು ಕಾರಣ ಈ ಕ್ಷೇತ್ರದ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೇಳಿಕೊಂಡಿದ್ದಾರೆ.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group