ಮೂಡಲಗಿ: ಯುವಕರು ಮಹರ್ಷಿ ಶ್ರೀ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸಮಾಜಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು.
ಅವರು ಇಲ್ಲಿಯ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಾಲೂಕಾ ಆಡಳಿತ, ತಾ.ಪಂ, ಪುರಸಭೆ ಕಾರ್ಯಲಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜರುಗಿದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಉತ್ಸವ ಸಮಾರಂಭದಲ್ಲಿ ಮಾತನಾಡಿ, ಹಿಂದೂ ಧರ್ಮದ ಪ್ರಮುಖ ಗ್ರಂಥಗಳಲ್ಲಿ ಒಂದಾದ ರಾಮಾಯಣ ಬರೆದಿದ್ದಕ್ಕಾಗಿ ವಾಲ್ಮೀಕಿ ಅವರು ಪ್ರಸಿದ್ಧರಾಗಿದ್ದಾರೆ, ರಾಮಾಯಣವು ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.
ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಡಾ.ವಾಯ್.ವಾಯ್.ಕೊಕ್ಕನವರ ಶ್ರೀ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಿ ಗೌರವಿಸಿದರು
ಸಮಾರಂಭದ ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಪ್ರಭಾ ಶುಗರ್ಸ ನಿರ್ದೇಶಕ ಮಲ್ಲಿಕಾರ್ಜುನ ಕಬ್ಬೂರ, ಬಿ.ಇ.ಒ ಅಜೀತ ಮನ್ನಿಕೇರಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ವಾಯ್.ಕೆ.ಗದಾಡಿ, ತಾ.ಪಂ ಕಚೇರಿಯ ಎಸ್.ಎಸ್.ರೊಡ್ಡನವರ. ಡಾ.ಭಾರತಿ ಕೋಣಿ, ಪುರಸಭೆ ಸದಸ್ಯ ಆನಂದ ಟಪಾಲದಾರ ಮತ್ತು ತಾಲೂಕಿನ ವಾಲ್ಮೀಕಿ ಸಮಾಜ ಭಾಂದವರು ಇದ್ದರು.
ಶಿಕ್ಷಕ ಬಸವರಾಜ ಸಸಾಲಟ್ಟಿ ನಿರೂಪಿಸಿದರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಭರತೇಶ ಬೋಳಿ ವಂದಿಸಿದರು