spot_img
spot_img

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಸ್ವಚ್ಛ ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸಿ – ಆನಂದ ಮಾಮನಿ

Must Read

spot_img
- Advertisement -

ಸವದತ್ತಿ – ಪ್ರತಿಯೊಂದು ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛ ಸುಂದರ ಪರಿಸರದೊಂದಿಗೆ ಯುವಕರು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಅವರು ತಾಲೂಕಿನ ಆಲದಕಟ್ಟಿ ಕೆ.ಎಮ್ ಗ್ರಾಮದಲ್ಲಿ ಮಹಾತ್ಮಾ ಗಾಂದಿ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನೆಲಹಾಸು ಕಾಮಗಾರಿಗೆ ಹಾಗೂ ಇದೇ ಗ್ರಾಮದ ಹತ್ತಿರ 20 ಲಕ್ಷ ರೂಪಾಯಿಗಳ ವೆಚ್ಚದ ಕಸ ವಿಲೇವಾರಿ ಘಟಕ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು

ಸವದತ್ತಿ ತಾಲೂಕಿನಲ್ಲಿ ಬರುವ ಎಲ್ಲ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಹಾಗೂ ರಸ್ತೆ ಕಾಮಗಾರಿ ಮತ್ತು ಮೂಲ ಸೌಲಭ್ಯ ಒದಗಿಸುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿರುವೆ ಇನ್ನೂ ಹಲವಾರು ಅಭಿವೃದ್ಧಿ ಪರ ಕಾರ್ಯಗಳು ಇದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು,

- Advertisement -

ತಾಪಂ ಮಾಜಿ ಅಧ್ಯಕ್ಷ ವಿನಯಕುಮಾರ ದೇಸಾಯಿ , ಗ್ರಾಪಂ ಅಧ್ಯಕ್ಷ ಶ್ರೀಮತಿ ಜಾನವ್ವ ಆಡಿನ, ಉಪಾಧ್ಯಕ್ಷ ಫಕೀರಗೌಡ ಸಣ್ಣಗೌಡರ, ಸದಸ್ಯ ಅಶೋಕ ಚಿಕ್ಕೊಪ್ಪ, ಸುರೇಶ ಮುಗಳಿ, ಮಹಾತ್ಮಾ ಗಾಂಧಿ ಯೋಜನೆಯ ಸಹಾಯಕ ನಿರ್ದೇಶಕ ಸಂಗನಗೌಡಾ ಹಂದ್ರಾಳ ಹಾಗೂ ಪ್ರಭಾವತಿ ಗುರನಗೌಡರ, ಪ್ರೇಮಾ ಡಮ್ಮಣಗಿ, ಶೋಭಾ ಮಾದರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ ಎನ್ ಕೌಜಲಗಿ, ಮುಖ್ಯಶಿಕ್ಷಕ ಜಿ.ಎಮ್.ಯರಗಟ್ಟಿ, ಎಸ್ ಎಸ್ ಮುಗಳಿ, ರಾಯಪ್ಪ ರಾಯನ್ನವರ, ಬಸಲಿಂಗಯ್ಯ ಹಿರೇಮಠ, ಫಕೀರಪ್ಪ ಗುನಪ್ಪನವರ, ಪುಂಡಲೀಕ ಮೇಟಿ, ಬಸಪ್ಪ ನಂಜನ್ನವರ, ಬಸವರಾಜ ಹಳೇಮನಿ ಹಾಗೂ ಕಾರ್ಯಕರ್ತರು ಮುಖಂಡರು ಇದ್ದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group