ಸಿಂದಗಿ: ದೇಶವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ ಕಾರಣ ಸಾರ್ವಜನಿಕರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ 2021/22 ನೇ ಸಾಲಿನ ಅನಿರ್ಬಂಧಿತ ( ಅಭಿವೃದ್ಧಿ ) 1 ಅನುದಾನ ಅಡಿಯಲ್ಲಿ ಮಂಜೂರಾದ ಅಂಗನವಾಡಿ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರು ನನ್ನ ಮೇಲೆ ವಿಶ್ವಾಸವನ್ನಿಟ್ಟು ನಿರೀಕ್ಷೆಗಿಂತಲೂ ಅಧಿಕ ಮತಗಳಿಂದ ಆಯ್ಕೆ ಮಾಡಿ ಕಳಿಸಿದ್ದೀರಿ ಉಳಿದ ಅಲ್ಪ ಅವಧಿಯಲ್ಲಿ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿ ಪಡಿಸುವ ಸಂಕಲ್ಪವನ್ನು ಇಟ್ಟುಕೊಂಡಿದ್ದೇನೆ ತಮ್ಮ ಗ್ರಾಮದಲ್ಲಿ ನಡೆಯುವ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡಿಕೊಂಡು ನಿಮ್ಮ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್, ಬಾಬುಗೌಡ ಪಾಟೀಲ್, ಶಾಂತಗೌಡ ಬಿರಾದಾರ್, ಅಶೋಕ ಪಾಟೀಲ, ಶಿವಶರಣ ಯಾಳವಾರ, ಗುರು ಕೊರಳ್ಳಿ ಸೇರಿದಂತೆ ಹಲವರಿದ್ದರು.