ಗೋಕಾಕ- ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಸಕ್ರಿಯ ಸದಸ್ಯರನ್ನು ಮಾಡಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯಲು ಮುಂದಾಗುವಂತೆ ರಾಷ್ಟ್ರೀಯ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು.
ಗುರುವಾರದಂದು ಎನ್ಎಸ್ಎಫ್ ಕಛೇರಿಯಲ್ಲಿ ಅರಭಾವಿ ಮಂಡಲದಿಂದ ಜರುಗಿದ ಸಂಘಟನಾ ಪರ್ವದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಬಿಜೆಪಿಯು ಅತೀ ಹೆಚ್ಚಿನ ಸದಸ್ಯರನ್ನು ಹೊಂದಿರುವ ಏಕಮೇವ ಪಕ್ಷವಾಗಿದೆ ಎಂದು ತಿಳಿಸಿದರು.
ಈಗಾಗಲೇ ಪಕ್ಷದಿಂದ ಸಕ್ರಿಯ ಸದಸ್ಯತ್ವದ ನೋಂದಣಿ ಅಭಿಯಾನವು ನಡೆಯುತ್ತಿದ್ದು, ಈ ಅಭಿಯಾನವನ್ನು ಯಶಸ್ವಿಯಾಗಿ ಮಾಡಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯ ಸದಸ್ಯರನ್ನು ಮಾಡಿ ಮುಂಬರುವ ತಾ.ಪಂ. ಮತ್ತು ಜಿ.ಪಂ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವಿನ ಕೇಕೇ ಹಾರಿಸಲು ಶ್ರಮಿಸಲು ತಿಳಿಸಿದರು.
ವೇದಿಕೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ, ಪರಸಪ್ಪ ಬಬಲಿ, ಮುತ್ತೆಪ್ಪ ಮನ್ನಾಪೂರ, ಮಹಾಂತೇಶ ಕುಡಚಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.