spot_img
spot_img

ಜಾನುವಾರು ಗಣತಿ ಯಶಸ್ವಿಯಾಗಿ ಪೂರೈಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

Must Read

spot_img
- Advertisement -

ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೊಂದು ರಾಷ್ಟೀಯ ಕಾರ್ಯಕ್ರಮವಾಗಿದ್ದು, ಜಾನುವಾರು ಸಂರಕ್ಷಣಾ ಯೋಜನೆಗಳನ್ನು ರೂಪಿಸಲು ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಈ ವರ್ಷದ ಅಂತ್ಯತನಕ ಎಲ್ಲ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಗಣತಿದಾರರು ಪ್ರತಿಯೊಂದು ಮನೆ, ಸಂಸ್ಥೆ, ಉದ್ಯಮಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಸಾಕು ಪ್ರಾಣಿಗಳು ಮತ್ತು ಕುಕ್ಕಟಗಳ ಮಾಹಿತಿಗಳನ್ನು ಸಂಗ್ರಹಿಸಬೇಕು. ಬೀದಿ ದನಗಳು, ಬೀದಿ ನಾಯಿಗಳ ಮಾಹಿತಿಯನ್ನು ಸಹ ಸಂಗ್ರಹಿಸಬೇಕು. ಜೊತೆಗೆ ಕುಟುಂಬದ ಯಜಮಾನರ ಸಾಮಾಜಿಕ ಸ್ಥಿತಿ-ಗತಿ, ವಿದ್ಯಾರ್ಹತೆ, ಉದ್ಯೋಗದ ಜತೆಗೆ ಕೃಷಿ ಹಿಡುವಳಿ ಬಗ್ಗೆಯೂ ಮಾಹಿತಿಯನ್ನು ಸಂಗ್ರಹಿಸಿಕೊಳ್ಳುವಂತೆ ಅವರು ಪಶು ಪಾಲನಾ ಇಲಾಖೆಯವರಿಗೆ ಸೂಚಿಸಿದರು.

- Advertisement -

ಈ ಹಿಂದೆ ಅಂದರೆ ೨೦೧೯ ರಲ್ಲಿ ನಡೆದಿದ್ದ ಜಾನುವಾರ ಗಣತಿಯಲ್ಲಿ ಗೋಕಾಕ ತಾಲ್ಲೂಕಿನಲ್ಲಿ ೨,೮೩,೮೬೧ ಮತ್ತು ಮೂಡಲಗಿ ತಾಲ್ಲೂಕಿನಲ್ಲಿ ೧,೮೪,೦೯೭ ಜಾನುವಾರುಗಳಿದ್ದವು ಎಂಬುದನ್ನು ಸ್ಮರಿಸಿದ ಅವರು, ಇದೇ ಡಿಸೆಂಬರ್ ತಿಂಗಳೊಳಗೆ ನಡೆಯುವ ಜಾನುವಾರ ಗಣತಿ ಕಾರ್ಯ ಮುಗಿದ ಬಳಿಕ ಮತ್ತೊಮ್ಮೆ ನಿಖರವಾದ ಮಾಹಿತಿಯು ಹೊರಬೀಳಲಿದೆ ಎಂದವರು ತಿಳಿಸಿದ್ದಾರೆ.

ಗಣತಿದಾರರು ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ಅವರಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಈ ರಾಷ್ಟ್ರೀಯ ಕಾರ್ಯಕ್ಕೆ ಸಾರ್ವಜನಿಕರ ಸಹಕಾರವು ಅವಶ್ಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋ-ಮಾತೆಗೆ ಪೂಜೆ ಮಾಡುವ ಮೂಲಕ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ಮಾಡಿದರು.
ಈ ಸಂದರ್ಭದಲ್ಲಿ ಗೋಕಾಕ ತಹಶೀಲದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಹಶೀಲದಾರ ಎಸ್.ಎ. ಬಬಲಿ, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಎಫ್.ಜಿ.ಚಿನ್ನನ್ನವರ, ಪರಶುರಾಮ ಗಸ್ತೆ, ಸ್ಥಳೀಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಮೋಹನ ಕಮತ, ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು, ಪಶು ವೈದ್ಯಕೀಯ ಇಲಾಖೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group