spot_img
spot_img

ಗಂಡಭೇರುಂಡ ಪಕ್ಷಿ

Must Read

- Advertisement -

ಭೌತಿಕವಾಗಿ ಅದನ್ನು ಅವಲೋಕಿಸಿದರೆ ಸಯಾಮಿ ಪಕ್ಷಿಯಂತೆ ಗೋಚರಿಸಿ ವಿಶೇಷವೆನಿಸುತ್ತದೆ. ಪಕ್ಷಿಯು ಎರಡು ತಲೆ, ಚೂಪಾದ ಕೊಕ್ಕು, ಎರಡು ತಲೆಯು ಎರಡು ದಿಕ್ಕಿಗೆ ಪರಸ್ಪರ ವಿರುದ್ದವಾಗಿ ನಿಂತಿದ್ದು ಒಂದೇ ಶರೀರವನ್ನು ಹೊಂದಿದೆ. ಶಿವಮೊಗ್ಗ ಜಿಲ್ಲೆಯ ಬಳ್ಳಿಗಾವಿಯಲ್ಲಿರುವ ಗಂಡಭೇರುಂಡ ಪಕ್ಷಿಯ ಪ್ರತಿಮೆ ಕರ್ನಾಟಕದ ಗಂಡಭೇರುಂಡ ಶಿಲ್ಪಗಳಲ್ಲಿ ಅತ್ಯಂತ ಪ್ರಾಚೀನವಾದುದು. ಎತ್ತರವಾದ ಸ್ತಂಭದ ಮೇಲೆ ನಿಂತಿರುವ ಈ ಶಿಲ್ಪದ ಶರೀರ ಮಾನವಾಕಾರವನ್ನು ಹೊಂದಿದ್ದು, ಕಂಠದ ಮೇಲೆ ಮಾತ್ರ ಗಿಡುಗ ಪಕ್ಷಿಯ ರೀತಿಯ ಎರಡು ತಲೆಗಳಿವೆ. ಈ ಪಕ್ಷಿ ರಾಕ್ಷಸರನ್ನು ನುಂಗುತ್ತಿರುವಂತೆ ಚಿತ್ರಿತವಾಗಿದೆ. ಈ ಸ್ತಂಭದ ಅಡಿಯಲ್ಲಿರುವ ಶಾಸನದಲ್ಲಿ ಇದನ್ನು ‘ಭೇರುಂಡೇಶ್ವರ’ ಎಂದು  ಹೆಸರಿಸಿದೆ. ಇದನ್ನು ಕಲ್ಯಾಣ ಚಾಳುಕ್ಯರ ಮಹಾಮಂಡಲೇಶ್ವರನಾಗಿದ್ದ ಚಾವುಂಡರಾಯರಸ ಕ್ರಿ.ಶ 969 ರಲ್ಲಿ ಇದನ್ನು ಸ್ಥಾಪಿಸಿದನೆಂದು ಅದೇ ಶಾಸನ ತಿಳಿಸುತ್ತದೆ.

ಕರ್ನಾಟಕದಲ್ಲಿ ಗಂಡಭೇರುಂಡವನ್ನು ಲಾಂಛನವಾಗಿ ಬಳಸಲು ಆರಂಭವಾಗಿದ್ದು 13 ನೇ ಶತಮಾನದ ಉತ್ತರಾರ್ಧದಲ್ಲಿ. ಹೊಯ್ಸಳ ಅರಸ 3 ನೇ ನರಸಿಂಹ (1253-1293), ಮತ್ತು 3 ನೇ ಬಲ್ಲಾಳ (1293-1342) ಇವರ ಕಾಲದಲ್ಲಿನ ಕೆಲವು ಶಿಲಾಶಾಸನಗಳ ಮೇಲೆ ಗಂಡಭೇರುಂಡ ಚಿತ್ರವಿದೆ. ವಿಜಯನಗರದ ಸಾಮ್ರಾಟನಾಗಿದ್ದ ಅಚ್ಯುತರಾಯ (1530-1542) ನ ಚಿನ್ನ ಮತ್ತು ತಾಮ್ರದ ನಾಣ್ಯಗಳ ಮೇಲೆ ಗಂಡಭೇರುಂಡದ ಮುದ್ರೆಯಿದೆ. ಇದರಲ್ಲಿ ಸೊಂಡಿಲು ಬಾಲವನ್ನೆತ್ತಿಕೊಂಡಿರುವ ಭಯಗ್ರಸ್ತವಾದ ಆನೆಗಳನ್ನು ಆ ಪಕ್ಷಿ ತನ್ನೆರಡು ಕಾಲುಗಳಲ್ಲಿ ಸಿಕ್ಕಿಸಿ ಕೊಂಡಿದೆ. ನಂತರ ಮಧುರೆಯ ನಾಯಕರು, ಕೆಳದಿಯ ಅರಸರು ಗಂಡಭೇರುಂಡವನ್ನು ಲಾಂಛನವಾಗಿ ಬಳಸಿದರು. ಮೈಸೂರು ಒಡೆಯರು ವಿಜಯನಗರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಾಗ ತಮ್ಮ ಧ್ವಜದ ಮೇಲೆ ಗಂಡಭೇರುಂಡವನ್ನು ಪ್ರತಿಷ್ಠಾಪಿಸಿಕೊಂಡರು. ಅಂದಿನಿಂದ ಇಂದಿನವರೆವಿಗೂ ಇದು ಮೈಸೂರು ಒಡೆಯರ ಲಾಂಛನವಾಗಿ ಉಳಿದು ಬೆಳೆದು ಬಂದಿದೆ. ಸದ್ಯ ಕರ್ನಾಟಕ ರಾಜ್ಯದ ಅಧಿಕೃತ ಲಾಂಛನದಲ್ಲಿಯೂ ಗಂಡಬೇರುಂಡ ಚಿತ್ರವಿದೆ.


ಹೇಮಂತ ಚಿನ್ನು ಪರಿಸರ ಪರಿವಾರ

- Advertisement -

ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ಸಿಂದಗಿ ಅಧ್ಯಕ್ಷರಾಗಿ ಶಾಂತವೀರ, ಉಪಾಧ್ಯಕ್ಷರಾಗಿ ರಾಜಣ್ಣಿ ಆಯ್ಕೆ

ಸಿಂದಗಿ; ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾದ್ಯಕ್ಷರ ಅವಧಿ ಮುಗಿದು ಹಲವು ವರ್ಷಗಳು ಕಳೆದಿತ್ತು ಅದು ಅ. ೨೮ ರಂದು ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಸೆ.೯ ದಿನಾಂಕ...
- Advertisement -

More Articles Like This

- Advertisement -
close
error: Content is protected !!
Join WhatsApp Group