Homeಸುದ್ದಿಗಳುಸಾರಿಗೆ ಸಿರಿ ಪ್ರಶಸ್ತಿಗೆ ಮಲ್ಲಪ್ಪ ಭೈರಗೊಂಡ ಆಯ್ಕೆ

ಸಾರಿಗೆ ಸಿರಿ ಪ್ರಶಸ್ತಿಗೆ ಮಲ್ಲಪ್ಪ ಭೈರಗೊಂಡ ಆಯ್ಕೆ

ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಕಾರದೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ (ನೋಂ) ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಂಸ್ಕೃತಿಕ ಸಂಭ್ರಮ ಹಾಗೂ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಪುಷ್ಪ ನಮನ ಕಾರ್ಯಕ್ರಮದಲ್ಲಿ ಕನ್ನಡ ಕಲೆ ಸಾಹಿತ್ಯ ರಂಗಭೂಮಿ ಹಾಗೂ ಇನ್ನಿತರ ಕನ್ನಡ ಚಟುವಟಿಕೆಗಳಲ್ಲಿ ಗುರುತಿಸಿಕೊಂಡ ಪ್ರತಿಭಾನ್ವಿತ ಸಾಧಕರಿಗೆ ನೀಡುವ 2022ರ ಸಾರಿಗೆ ಸಿರಿ ಪ್ರಶಸ್ತಿಗೆ  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕೇಂದ್ರೀಯ ವಲಯದ ಘಟಕ-07 ರಲ್ಲಿ ತಾಂತ್ರಿಕ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕು ಹಾಲಕೆರೆ ಗ್ರಾಮದ ಯುವ ಬರಹಗಾರ ಮಲ್ಲಪ್ಪ ಭೈರಗೊಂಡ ಅವರು ಆಯ್ಕೆಯಾಗಿದ್ದಾರೆ.

ಅವರ ಕನ್ನಡ ಸಾಹಿತ್ಯ ಸೇವೆಯನ್ನು ಗುರುತಿಸಿ ನವಂಬರ್ 2 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕನ್ನಡ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ್ರು ಹಾಗೂ ಕನ್ನಡ ಚಲನಚಿತ್ರ ಗೀತ ರಚನೆಕಾರರಾದ  ವಿ. ನಾಗೇಂದ್ರ ಪ್ರಸಾದ್ ಅವರು ಹಾಗೂ ಇನ್ನಿತರ ಕನ್ನಡ ನಾಡಿನ ಗೌರವಾನ್ವಿತ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೀತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group