ಬೆಳಗಾವಿ – ಸುರೇಶ ಅಂಗಡಿಯವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಮಂಗಳಾ ಅಂಗಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು..
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರಿಗೆ ಮಂಗಳಾ ಅವರು ತಮ್ಮ ನಾಮಪತ್ರ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.