ಮಂಗಳಾ ಅಂಗಡಿ ಗೆಲುವು ಖಚಿತ – ಸಿ ಟಿ ರವಿ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಮೂಡಲಗಿ: ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಷ್ಟೇ ಅಪಪ್ರಚಾರ ಮಾಡಿದರೂ ಅವರ ಆಟ ಬಿಜೆಪಿ ಮುಂದೆ ನಡೆಯೊಲ್ಲ. ಮಂಗಳಾ ಅಂಗಡಿಯವರು ಈ ಚುನಾವಣೆಯಲ್ಲಿ ಭಾರಿ ಮತಗಳ ಮುನ್ನಡೆಯೊಂದಿಗೆ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಚಿ ಸಚಿವ ಸಿ.ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರಗಳಲ್ಲಿ ಭಾರಿ ಮುನ್ನಡೆ ದೊರಕಲಿದೆ ಎಂದು ಹೇಳಿದರು.

ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈ ಚುನಾವಣೆಯಲ್ಲಿ ಕಾರ್ಯದೊತ್ತಡದಿಂದ ಭಾಗವಹಿಸಲು ಸಾಧ್ಯವಾಗಿಲ್ಲ. ಆದರೆ ಎಲ್ಲ ಬಿಜೆಪಿ ನಾಯಕರೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ. ಜೊತೆಗೆ ತಮ್ಮೊಂದಿಗೆ ಸಹ ದೂರವಾಣಿ ಮೂಲಕ ಮಾತನಾಡಿರುವ ಬಾಲಚಂದ್ರ ಜಾರಕಿಹೊಳಿಯವರು ಕಳೆದ ಲೋಕಸಭಾ ಚುನಾವಣೆಗಿಂತ ಏಪ್ರೀಲ್ 17 ರಂದು ನಡೆಯುವ ಉಪಚುನಾವಣೆಯಲ್ಲಿ ಅತ್ಯಧಿಕ ಮತಗಳ ಮುನ್ನಡೆ ದೊರಕಿಸಿ ಕೊಡುವ ವಾಗ್ದಾನ ನೀಡಿದ್ದಾರೆಂದು ರವಿ ಹೇಳಿದರು.

- Advertisement -

ದಿ. ಸುರೇಶ ಅಂಗಡಿಯವರು 16 ತಿಂಗಳು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ ಕಾಣಿಕೆ ನೀಡಿದ್ದಾರೆ. 19 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ನೀಡಿದ್ದಾರೆ.

ಕರ್ನಾಟಕದ ಪರವಾಗಿ ಸಂಸತ್ತಿನಲ್ಲಿ ಗಟ್ಟಿಯಾಗಿ ನಿಂತುಕೊಂಡು ರಾಜ್ಯಕ್ಕೆ ಅನೇಕ ಯೋಜನೆಗಳನ್ನು ತಂದಿದ್ದಾರೆ. ನಾಲ್ಕು ಅವಧಿಗೆ ಸಂಸತ್ ಸದಸ್ಯರಾಗಿ, ಕೊನೆಗೆ ರೈಲ್ವೆ ಸಚಿವರಾಗಿ ಉತ್ತಮ ಸೇವೆ ನಿರ್ವಹಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಈ ಚುನಾವಣೆಯಲ್ಲಿ ದಿ. ಅಂಗಡಿಯವರ ಧರ್ಮಪತ್ನಿ ಕಣಕ್ಕಿಳಿದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಮನಗಂಡು ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅವರು ಕೋರಿದರು.

ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಸಿದ್ದು-ಡಿಕೆಶಿ ಕೂಡಿಕೊಂಡು ಬೆಳಗಾವಿಗೆ ಟಿಕೇಟ್ ಬೇಡವೆಂದರೂ ಒತ್ತಾಯ ಪೂರ್ವಕವಾಗಿ ಸತೀಶರನ್ನು ಕಣಕ್ಕಿಳಿಸಿದ್ದಾರೆ. ಅಂಗಡಿ ಅವರು ನಿಧನರಾದ ಕೆಲವೇ ದಿನಗಳಲ್ಲಿ ಕೆಲವು ಕಾಂಗ್ರೆಸ್ಸಿಗರು ದಿ. ಅಂಗಡಿ ಅವರ ಕುಟುಂಬಕ್ಕೆ ಟಿಕೇಟು ನೀಡಿದರೆ ತಾವು ಬೆಂಬಲಿಸುತ್ತೇವೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು ಎಂದು ಹೇಳಿದರು.

ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕೊವಿಡ್ ಸಂದರ್ಭದಲ್ಲಿ ಅರಭಾಂವಿ ಮತಕ್ಷೇತ್ರದ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿದ್ದಾರೆ. ಸೋಂಕಿತರಿಗೆ ಅಗತ್ಯವಿರುವ ದಿನಬಳಕೆಯ ವಸ್ತುಗಳು, ಮೆಡಿಕಲ್ ಕಿಟ್ ಸೇರಿದಂತೆ ಸಾಕಷ್ಟು ಕೆಲಸ ಮಾಡಿದ್ದಾರೆ. ಮಂಗಳಾ ಅವರಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಕೋರಿದ ಅವರು, ಅಂಗಡಿ ಅವರ ಗೆಲವು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ವೇದಿಕೆಯಲ್ಲಿ ಪ್ರಭಾ ಶುಗರ್ ನಿರ್ದೇಶಕ ಕೆಂಚಗೌಡ ಪಾಟೀಲ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಅರಭಾಂವಿ ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್ ವೆಂಕಟೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಓಬಿಸಿ ಜಿಲ್ಲಾಧ್ಯಕ್ಷ ಬಸವರಾಜ ಮಾಳದವರ, ಮುಖಂಡ ಬಸವಂತ ಕಮತಿ, ಅರಭಾಂವಿ ಪಪಂ ಅಧ್ಯಕ್ಷ ಲಕ್ಷ್ಮಣ ನಿಂಗಣ್ಣವರ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಪರಸಪ್ಪ ಬಬಲಿ, ಮಂಗಳಾ ಕೌಜಲಗಿ, ಆನಂದ ಮೂಡಲಗಿ, ಸಂದೀಪ ಪಾಟೀಲ, ವಿವೇಕಾನಂದ ಟಬ್ಬಿ, ಶಿವಾನಂದ ಮುರಕುಂಬಿ, ಪ್ರಕಾಶ ಮಾದರ, ಮಹಾಂತೇಶ ಕುಡಚಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!