ಎಸ್.ಬಿ. ಸಿದ್ನಾಳ ನಿಧನಕ್ಕೆ ಮಂಗಲಾ ಮೆಟಗುಡ್ ಸಂತಾಪ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಹಿರಿಯ ರಾಜಕಾರಣಿ ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಜ್ಜನ ಮುತ್ಸದ್ದಿ ರಾಜಕಾರಣಿ ತಮ್ಮ ಅಧಿಕಾರವಧಿಯಲ್ಲಿ ಹತ್ತು ಹಲವು ಯೋಜನೆಗಳನ್ನು ತಂದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾರಣರಾಗಿದ್ದ ಶ್ರೀ ಎಸ್.ಬಿ. ಸಿದ್ನಾಳ ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಕಸಾಪ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಯೋಸಹಜ ಹಿರಿಯರಾಗಿದ್ದರೂ ಸಹ ಕನ್ನಡದ ಹೋರಾಟ, ಕನ್ನಡಪರ ಕಾರ್ಯಕ್ರಮಗಳಿಗೆ ಮಾರ್ಗದರ್ಶನ ಮತ್ತು ಆಶೀರ್ವಾದ ನೀಡುತ್ತಾ ಕನ್ನಡವನ್ನು ಬೆಳೆಸುವ ಕಾಯಕದಲ್ಲಿ ಸದಾ ಸಕ್ರಿಯರಾಗಿದ್ದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ಬೈಲಹೊಂಗಲ ತಾಲೂಕಿನ ಯರಡಾಲ ಗ್ರಾಮದಲ್ಲಿ ನಡೆದ ತಾಲೂಕ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಅಧಿಕಾರವಧಿ ಅನುಭವ ಮತ್ತು ಆಗಿದ್ದ ಕನ್ನಡ ಮತ್ತು ಈಗ ಬೆಳೆದುಬಂದ ಕನ್ನಡದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು.

- Advertisement -

ಕನ್ನಡ ಬೆಳೆಯಲು ಮಠಾಧೀಶರಾ ದಿಯಾಗಿ ಎಲ್ಲರೂ ತಮ್ಮ ಕೈಲಾದ ಶ್ರಮ ವಹಿಸಬೇಕು ಎಂದು ಕರೆ ನೀಡಿದ್ದರು ಎಂದು ಸಮ್ಮೇಳನ ಸಮಯದಲ್ಲಿ ನಡೆದ ಘಟನಾವಳಿಗಳನ್ನು ನೆನೆದು ಸಂತಾಪ ವ್ಯಕ್ತಪಡಿಸಿದರು.

ಇವರ ಅಕಾಲಿಕ ನಿಧನ ಒಬ್ಬ ಹಿರಿಯ ಮುತ್ಸದ್ದಿಯನ್ನು ಕಳೆ ದುಕೊಂಡದ್ದಲ್ಲದೆ ಕನ್ನಡದ ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!