ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ಮಂಗಲಾ ಮೆಟಗುಡ್ ನಾಮಪತ್ರ ಸಲ್ಲಿಕೆ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಳಗಾವಿ – ಮೇ 9ರಂದು ಜರುಗಲಿರುವ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಹಾಲಿ ಅಧ್ಯಕ್ಷರಾಗಿರುವ ಮಂಗಲಾ ಶ್ರೀಶೈಲ್ ಮೆಟಗುಡ್ ರವರು ಸಮಸ್ತ ಜಿಲ್ಲೆಯ ಮಹಿಳಾ ಸಾಹಿತಿಗಳು, ಹಿರಿಯ ಸಾಹಿತಿಗಳು ಹಾಗೂ ತಾಲೂಕ ಘಟಕಗಳ ಅಧ್ಯಕ್ಷರುಗಳು ಹಾಗೂ ಸಮಸ್ತ ಕಸಾಪ ಸದಸ್ಯರ ಒತ್ತಾಸೆಯ ಮೇರೆಗೆ ಮತ್ತೊಮ್ಮೆ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅಪಾರ ಸಾಹಿತಿಗಳ ಬಳಗದೊಂದಿಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಕಳೆದ ಐದು ವರ್ಷಗಳಿಂದ ಒಬ್ಬ ಮಹಿಳೆಯಾಗಿ ಜಿಲ್ಲೆಯ ಸಾಹಿತ್ಯ ಪರಿಷತ್ತನ್ನು ಕ್ರಿಯಾತ್ಮಕವಾಗಿ ಮುನ್ನಡೆಸುವುದರ ಜೊತೆಗೆ ಅನೇಕ ಹಿರಿಯ, ಕಿರಿಯ ಮತ್ತು ಮಹಿಳಾ ಸಾಹಿತಿಗಳನ್ನು ಉತ್ತೇಜಿಸಿ ಸಾಹಿತ್ಯಲೋಕಕ್ಕೆ ಪ್ರೋತ್ಸಾಹಿಸಿದ್ದಾರೆ. ಜೊತೆಗೆ ಐತಿಹಾಸಿಕವಾಗಿ ಐದು ವರ್ಷದ ಅವಧಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮತ್ತು ಹೋಬಳಿ ಮಟ್ಟ ಸೇರಿದಂತೆ ಒಟ್ಟು 48 ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ಸಾಹಿತ್ಯದ ಅಭಿರುಚಿಯನ್ನು ಮನೆ ಮನೆಗೆ ತಲುಪಿಸುವ ಮಹತ್ತರ ಕಾರ್ಯಗಳನ್ನು ಮಾಡಿರುವ ಮಂಗಲಾ ಮೆಟಗುಡ್ ರವರು ಈ ಸ್ಥಾನಕ್ಕೆ ಸೂಕ್ತ ಮತ್ತು ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಹಿರಿಯ ಸಾಹಿತಿಗಳಾದ ನೀಲಗಂಗಾ ಚರಂತಿಮಠ, ಸ.ರಾ. ಸುಳಕೂಡೆ, ಹೇಮಾ ಸೋನೊಳ್ಳಿ , ಸಿ ವಿ ಜ್ಯೋತಿ ಅಭಿಪ್ರಾಯಪಟ್ಟರು.

- Advertisement -

ಈ ಸಂದರ್ಭದಲ್ಲಿ ಕೆ. ಎಲ್. ಈ ಸಂಸ್ಥೆ ಉಪಾಧ್ಯಕ್ಷರಾದ ಬಸವರಾಜ ತಟವಟಿ, ಮೀನಾಕ್ಷಿ ಕುಡಸೋಮಣ್ಣವರ, ರತ್ನಪ್ರಭಾ ಬೆಲ್ಲದ್,ಖಾನಾಪೂರ ತಾಲೂಕ ಅಧ್ಯಕ್ಷರಾದ ವಿಜಯ ಬಡಿಗೇರ, ಕಿತ್ತೂರಿನ ಸೋಮಶೇಖರ ಹಲಸಗಿ, ಬೈಲಹೊಂಗಲದ ಗೌರಾದೇವಿ ತಾಳಿಕೋಟಿಮಠ, ಗೋಕಾಕದ ಮಹಾಂತೇಶ ತಾಂವಶಿ, ಸಿದ್ದರಾಮ ದ್ಯಾಗ್ಯಾನಟ್ಟಿ, ಮಹಾಂತೇಶ ಉಕ್ಕಲಿ , ನಿಪ್ಪಾಣಿಯ ವಿದ್ಯಾವತಿ ಜನವಾಡೆ, ಅವಳೇ ಕುಮಾರ, ಜಿಲ್ಲಾ ಕಾರ್ಯದರ್ಶಿ ಎಂ ವೈ ಮೆಣಸಿನಕಾಯಿ, ವೀರಭದ್ರ ಅಂಗಡಿ, ಶಿವಾನಂದ ತಲ್ಲೂರ, ಎಸ್. ಎಫ್ ಹರಕುಣಿ, ಲೋಕೇಶ ತಲ್ಲೂರ, ಅನ್ನಪೂರ್ಣ ಕನೋಜ ಪಾರ್ವತಿ ಪಾಟೀಲ, ಪ್ರಕಾಶ ಹಲಸಗಿ, ಎಂ ಎಸ್ ಕಲ್ಮಠ, ಆನಂದ ಮುತ್ನಾಳ, ಎಸ್ ಬಿ ದಳವಾಯಿ, ವಾಸನಗೌಡ ಪಾಟೀಲ, ಮಲ್ಲೇಶ್ ದೊಡಮನಿ ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳು ಹಾಜರಿದ್ದರು.

ನಾಮಪತ್ರ ಸಲ್ಲಿಸಿ ಮಾತನಾಡಿದ ಮಂಗಲಾ ಮೆಟಗುಡ್ ರವರು ಮುಂದಿನ ಐದು ವರ್ಷಗಳಲ್ಲಿ ಪ್ರತಿ ತಾಲೂಕಿಗೆ ಅಪೂರ್ಣ ಕಟ್ಟಡಗಳನ್ನು ಪೂರ್ಣಗೊಳಿಸುವುದು, ತಾಲೂಕಿಗೊಂದು ಸಾಹಿತ್ಯ ಭವನ ನಿರ್ಮಾಣ, ಶಾಲಾ-ಕಾಲೇಜು ಯುವ ವಿದ್ಯಾರ್ಥಿಗಳಿಗೆ ಸಾಹಿತ್ಯ ಕಮ್ಮಟ ಏರ್ಪಡಿಸುವುದು, ಮಹಿಳಾ, ಕೃಷಿ ಮತ್ತು ಕಾನೂನು ವಿಭಾಗಗಳಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಉತ್ತೇಜಿಸುವುದರ ಮೂಲಕ ಕಾರ್ಯಕ್ರಮ ಆಯೋಜನೆ, ತೆರೆಮರೆಯಲ್ಲಿರುವ ಹಿರಿಯ ಮತ್ತು ಕಿರಿಯ ಸಾಹಿತಿಗಳ ಕುರಿತು ಡಾಕ್ಯುಮೆಂಟರಿ ಮಾಡುವುದು, ಗಡಿ ಭಾಗದ ಶಾಲೆಗಳಲ್ಲಿ ವಿಶೇಷವಾಗಿ ಕನ್ನಡಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದು ಹೀಗೆ ಹತ್ತು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸುವುದರ ಜೊತೆಗೆ ಜಿಲ್ಲೆಯ ಹಿರಿಯರು, ಪೂಜ್ಯರು ಮತ್ತು ಸಂಘ ಸಂಸ್ಥೆಗಳ ಸಹಕಾರದಿಂದ ಜಿಲ್ಲಾ ಸಾಹಿತ್ಯ ಕ್ಷೇತ್ರಮೂಲಕ ಕನ್ನಡ ಕಟ್ಟುವ ಕೆಲಸಕ್ಕೆ ತಮ್ಮನ್ನು ಮತ್ತೊಮ್ಮೆ ಆಶೀರ್ವದಿಸಬೇಕೆಂದು ಮನವಿ ಮಾಡಿಕೊಂಡರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!