ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮಣ್ಣೂರ, ಬೆಳಗಾವಿಯಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ತರಬೇತಿ ಕಾರ್ಯಕ್ರಮಕ್ಕೆ ಸಮಗ್ರ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಶ್ರೀ ಶಿವರಾಮ ಎಂ.ಆರ್ ಮತ್ತು ಕಿರಿಯ ಕಾರ್ಯಕ್ರಮ ಅಧಿಕಾರಿಯಾದ ಶ್ರೀಮತಿ ಹೊನ್ನಕಸ್ತೂರಿ ಭೇಟಿ ನೀಡಿ ಶಿಬಿರಾರ್ಥಿಗಳೊಂದಿಗೆ ಸಂವಹನ ನಡೆಸಿದರು.
ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜಂಟಿ ಆಯುಕ್ತರು, “ತರಬೇತಿಯಲ್ಲಿ ಪಡೆದ ಗುಣಮಟ್ಟದ ವಿಷಯಗಳನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸಿ ಉತ್ತಮ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ” ಎಂದು ಹೇಳಿದರು. ತರಬೇತಿ ಮೂಲಕ ಶಿಕ್ಷಕರು ಮತ್ತು ಅನುಷ್ಠಾನಾಧಿಕಾರಿಗಳು ತಮ್ಮ ಕಾರ್ಯಪಟುವನ್ನು ಬಲಪಡಿಸಿದಾಗ ಶಾಲಾ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಾಧ್ಯ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪ ನಿರ್ದೇಶಕ (ಅಭಿವೃದ್ಧಿ) ಬಸವರಾಜ ನಾಲವತವಾಡ, ಸಲೀಂ ನಧಾಪ್, ಐ.ಡಿ. ಹಿರೇಮಠ, ಶ್ರೀಮತಿ ರಾಜೇಶ್ವರಿ ಕುಡಚಿ, ಶ್ರೀಮತಿ ನಾಗರತ್ನ ನಾವಿ ಸೇರಿದಂತೆ ತರಬೇತಿ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.
ತರಬೇತಿಯಲ್ಲಿ ಭಾಗವಹಿಸಿದ್ದ ಶಿಕ್ಷಕರು ಮತ್ತು ಅನುಷ್ಠಾನಾಧಿಕಾರಿಗಳು ಚರ್ಚೆಗಳು, practically sessions ಮತ್ತು ಗುಣಮಟ್ಟದ ಬೋಧನೆಗೆ ಸಂಬಂಧಿಸಿದ ವಿಷಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

