ಬೀದರ – ಗೋ ಸಂರಕ್ಷಣೆ ಮಾಡುವುದರ ಬಗ್ಗೆ ಸಂವಿಧಾನದಲ್ಲಿ ಕಾನೂನು ಇದೆ. ಹಲವು ರಾಜ್ಯದಲ್ಲಿ ಈಗಾಗಲೆ ಗೋ ರಕ್ಷಣೆ ಕಾನೂನು ಜಾರಿಗೆ ಬಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಬೀದರ ನಲ್ಲಿ ಪಶು ವೈದ್ಯಕೀಯ ಹಾಗು ಮೀನುಗಾರಿಕೆ ವಿಶ್ವವಿದ್ಯಾಲಯಗಳ ೧೨ ನೇ ಘಟಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಇನ್ನೂ ಹಾಲು ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ಜಾರಿಗೆ ತಂದಿವೆ. ನಮ್ಮ ದೇಶದಲ್ಲಿ ಇನ್ನೂ ಹಾಲು ಉತ್ಪಾದನೆ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಈ ಮುಂಚೆ ಬೀದರ್ ನಗರಕ್ಕೆ ಆಗಮಿಸಿದ ರಾಜ್ಯಪಾಲರು ಗೋವು ಗಳಿಗೆ ಪೂಜೆ ಸಲ್ಲಿಸಿದರು. ಪಶುವೈದ್ಯಕೀಯ ವಿಶ್ವವಿದ್ಯಾಲಯ ಆವರಣದಲ್ಲಿ ಗೋವು ಗಳಿಗೆ ಪೂಜೆ ಮಾಡಿದ ರಾಜ್ಯಪಾಲರಿಗೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಸಾಥ್ ನೀಡಿದರು.
ವಿಶ್ವವಿದ್ಯಾಲಯ ಕುಲಪತಿ ಹಾಗು ಹಲವು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 12ನೇ ಘಟಿಕೋತ್ಸವ ನಿಮಿತ್ತ ರಾಜ್ಯಪಾಲರ ಆಗಮನಕ್ಕೆ ವಿಶ್ವವಿದ್ಯಾಲಯ ಮದುವಣಗಿತ್ತಿಯಂತೆ ಸಜ್ಜುಗೊಂಡಿತ್ತು.
ಬೀದರ ನಗರದಿಂದ 10 ಕಿ.ಮೀ. ದೂರದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯದಲ್ಲಿ ವಿವಿಧ ಪದವಿಗಳಲ್ಲಿ ಉನ್ನತ ಮಟ್ಟದ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವ ಸುಮಾರು50 ರಿಂದ 60 ವಿದ್ಯಾರ್ಥಿಗಳಿಗೆ ಬಂಗಾರದ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ರಾಜ್ಯಪಾಲರ ಆಗಮನದ ಕಾರಣ ವಿಶ್ವವಿದ್ಯಾಲಯದ ಸಂಪೂರ್ಣ ಕಟ್ಟಡಗಳಿಗೆ ಬಣ್ಣ ಬಳಿಯಲಾಗಿದೆ. ಮುಖ್ಯದ್ವಾರ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ.
ರಸ್ತೆಗಳು ಸ್ವಚ್ಛತೆಯಿಂದ ಆಕರ್ಷಣೀಯವಾಗಿವೆ. ವಿಶ್ವವಿದ್ಯಾಲಯದ ಆವರಣದಲ್ಲಿರುವ ವಿದ್ಯುತ್ ಕಂಬಗಳು ದೀಪಕಗಳಿಂದ ಝಗಮಗಿಸುತ್ತಿವೆ. ವಿಶ್ವವಿದ್ಯಾಲಯದ ಉದ್ಯಾನವನ ಹಚ್ಚ ಹಸುರಿನಿಂದ ಕಂಗೋಳಿಸುತ್ತಿದೆ. ಒಟ್ಟಿನಲ್ಲಿ ವಿಶ್ವವಿದ್ಯಾಲಯವು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.
ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಸಿ.ವೀರಣ್ಣನವರು ಕುಲಪತಿಗಳಾದ ಅಧಿಕಾರಕ್ಕೆ ಬಂದ ಮೇಲೆ ಪ್ರಥಮ ಘಟಿಕೋತ್ಸವ ಅತ್ಯಂತ ಶಿಸ್ತುಬದ್ಧವಾಗಿ ನಡೆಸಲು ಪೂರ್ವತಯಾರಿ ನಡೆಸಿದ್ದಾರೆ ಎಂದು ಹೇಳಬಹುದು.
ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಗಮನಕ್ಕೆ ತೆಗೆದುಕೊಂಡು ಸಾಮೂಹಿಕ ಶ್ರಮ ವಹಿಸುತ್ತಿದ್ದಾರೆ. ಸಮಾರಂಭದ ಯಶಸ್ವಿಗಾಗಿ ಪ್ರತಿದಿನ ನಡೆಯುವ ಕೆಲಸಗಳನ್ನು ಗಮನಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಅಲ್ಲದೇ 12ನೇ ಘಟಿಕೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಅವಿರತ ಶ್ರಮ ವಹಿಸುತ್ತಿದ್ದಾರೆ.
ಬೀದರ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಧಿಕಾರಿಗಳಾದ ಸುಭಾಷ ಹೊಸೂರ ಅವರು ಕಾರ್ಯಕ್ರಮ ಯಶಸ್ವಿಯಾಗಲೇಬೇಕೆಂದು ನಿರಂತರ ಎಲ್ಲಾ ಸಿಬ್ಬಂದಿಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸುತ್ತ ಕಾರ್ಯಕ್ರಮಕ್ಕೆ ಯಾವುದೇ ಕೊರತೆಯಾಗದಂತೆ ಸೂಕ್ತ ಅನುದಾನ ಒದಗಿಸಿ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಘಟನೆಗಳು ನಡೆಯದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಯಕ್ರಮದ ಆಗುಹೋಗುಗಳ ಮೇಲೆ ಗಮನವಿಟ್ಟು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಮಾಡುತ್ತ ಅವಿರತ ಶ್ರಮ ವಹಿಸುತ್ತಿದ್ದಾರೆ. ಮೇಲಾಧಿಕಾರಿಗಳ ಆದೇಶದಂತೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ.ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಘಟಿಕೋತ್ಸವ ನಡೆಯದ ಕಾರಣ ವಿವಿಧ ಪದವಿ ಪಡೆದ ಹಳೆಯ ಹಾಗೂ ಹೊಸ ವಿದ್ಯಾರ್ಥಿಗಳಿಗೆ ಬಂಗಾರದ ಪದಕ ವಿತರಣೆ, ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಈ ಬಾರಿ ನಡೆಯುತ್ತಿರುವುದು ಈ ಭಾಗದ ಜನತೆಗೆ ಹರ್ಷ ತಂದಿದೆ. ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಿಮಿತ್ಯ ಸದ್ಯ ವಿಶ್ವವಿದ್ಯಾಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದಂತೂ ಸತ್ಯ.
ಈ ಸಮಾರಂಭಕ್ಕಾಗಿ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆಮಾಡಿದೆ. ಕಾರ್ಯಕ್ರಮ ಎಲ್ಲ ರೀತಿಯಿಂದಲೂ ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಎಲ್ಲ ರೀತಿಯಿಂದ ಶ್ರಮ ವಹಿಸಲಾಗಿತ್ತು.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ