ಬೆಳಗಾವಿ ನಗರ ಕೇಂದ್ರ ಗ್ರಂಥಾಲಯದಲ್ಲಿ “ಹುತಾತ್ಮರ ದಿನ” ಆಚರಣೆ

Must Read

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಜ.30 ರಂದು “ಹುತಾತ್ಮರ ದಿನ” ಆಚರಣೆ ಮಾಡಲಾಯಿತು.ಮುಂಜಾನೆ 11 ಗಂಟೆಗೆ 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.ಪ್ರತಿ ವರ್ಷ ಜನವರಿ 30 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರಿಗೆ ಗೌರವ ಸಲ್ಲಿಸುವ ದಿನವಾಗಿದೆ. ಈ ದಿನದಂದು ಬೆಳಗ್ಗೆ 11 ಗಂಟೆಗೆ ದೇಶಾದ್ಯಂತ ಎರಡು ನಿಮಿಷಗಳ ಮೌನ ಆಚರಿಸಲಾಗುತ್ತದೆ.

ಉಪನಿರ್ದೇಶಕರಾದ ರಾಮಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರಿಗೆ ಗೌರವ ಮತ್ತು ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಕ್ಕಾಗಿ ಪ್ರಾಣ ಅರ್ಪಿಸಿದ ಸೈನಿಕರ ತ್ಯಾಗವನ್ನು ಸ್ಮರಿಸುವುದು ಈ ದಿನದ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಗ್ರಂಥಪಾಲಕರಾದ ಎಸ್ ಎಸ್ ಸೀಮಿಮಠ, ಆನಂದ ಮುತಗಿ, ಸುಮಿತ್ ಕಾವಳೆ, ಪ್ರಕಾಶ ಇಚಲಕರಂಜಿ, ಸುನಿಲಕುಮಾರ್, ಸಂಗೀತಾ ನಾವಿ, ಇ ಎನ್ ಅಂಬೇಕರ,ಮತ್ತು ಎಲ್ಲ ಸಿಬ್ಬಂದಿ, ಓದುಗರು ಹಾಜರಿದ್ದು,ಗೌರವ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group