spot_img
spot_img

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Must Read

ಮೂಡಲಗಿ: ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕಾರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ವಿಶ್ವವಿದ್ಯಾಲಯ, ಜವಾಹರಲಾಲ ನೆಹರು ವೈದ್ಯಕೀಯ ಹಾಗೂ ಪ್ರಭಾಕರ ಕೋರೆ ಆಸ್ಪತ್ರೆ, ವ್ಯದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ, ಸಿಂಧೂತಾಯಿ ಮಹಾದೇವರಾವ ದಳವಾಯಿ ಎಜ್ಯುಕೇಶನ್ ಟ್ರಸ್ ಕೌಜಲಗಿ ಇವುಗಳ ಸಹಯೋಗದಲ್ಲಿ ಮಾ.4ರಂದು ಮುಂಜಾನೆ 9ಗಂಟೆಯಿಂದ ಕೌಜಲಗಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಂಧೂತಾಯಿ ಮಹಾದೇವರಾವ ದಳವಾಯಿ ಎಜ್ಯುಕೇಶನ್ ಟ್ರಸ್  ಅಧ್ಯಕ್ಷ ಅರವಿಂದ್ರ ದಳವಾಯಿ ಹೇಳಿದರು.

ಅವರು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಬಿರದಲ್ಲಿ ನ್ಯೂರೋಲಾಜಿ, ಕಾರ್ಡಿಯೋಲಜಿ, ಯುರೋಲಾಜಿ, ಸಜಿಕಲ್ ಅಂಕೋಲಾಜಿ,  ಎಲುಬು ಮತ್ತು ಕೀಲುಗಳ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ, ಸ್ತ್ರೀರೋಗ, ಚಿಕ್ಕಮಕ್ಕಳ ಚಿಕಿತ್ಸೆ, ಕಿವಿ, ಮೂಗು, ಗಂಟಲು ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಉಚಿತ ರಕ್ತ ತಪಾಸಣೆ, ದಂತರೋಗ, ಇಸಿಜಿ ತಪಾಸಣೆ ಜೊತೆಗೆ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಬಡ ಜನರು ಹಾಗೂ ಸಂಘ ಸಂಸ್ಥೆಗಳು ಉಚಿತ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದರು. ಶಿಬಿರದಲ್ಲಿ ಅನೇಕ ವೈದ್ಯ ವೃಂದವು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಬಡವರ ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರವು ಉಪಯುಕ್ತವಾಗಿದ್ದು, ಸರ್ಕಾರದ ವಿವಿಧ ಯೋಜನೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದು ಹಾಗೂ ಕಡ್ಡಾಯವಾಗಿ ಸಾರ್ವಜನಿಕರು ಆಧಾರ ಕಾರ್ಡ, ರೇಶನ್ ಕಾರ್ಡ ಝುರಾಕ್ಸ್ ತೆಗೆದುಕೊಂಡು ಶಿಬಿರದಲ್ಲಿ ಭಾಗಿಯಾಗಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ವಿ ಪಿ ನಾಯಕ್, ಗುಂಡಪ್ಪ ಕಮತೆ, ರವಿ ತುಪ್ಪದ, ವಿಠ್ಠಲ ಖಾನಟ್ಟಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!