ಹುಮನಾಬಾದ ತಹಶಿಲ್ದಾರರ ಮೇಲಿನ ಹಲ್ಲೆ ಖಂಡಿಸಿ ಬೀದರ್ ನಲ್ಲಿ ಭಾರಿ ಪ್ರತಿಭಟನೆ

Must Read

ಬೀದರ – ರಾಯಚೂರಿನ ಜಿಲ್ಲಾ ನ್ಯಾಯಾಧೀಶರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ ರ ಮೇಲೆ ಹಲ್ಲೆ ಮಾಡಿದ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ದಲಿತ ಸಂಘಟನೆಗಳು ದಿನನಿತ್ಯ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಕಲ್ಯಾಣ ಕರ್ನಾಟಕ ಸರ್ವ ಸಮಾಜ ಒಕ್ಕೂಟದ ವತಿಯಿಂದ ಭಾರಿ ಮೌನ ಪ್ರತಿಭಟನೆ ನಡೆಸಿದರು.

ಹುಮನಾಬಾದ್ ತಹಶಿಲ್ದಾರ ಡಾ.ಪ್ರದೀಪ್ ಮೇಲೆ ಪ್ರತಿಭಾಟನಾಕಾರರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ನಗರದಲ್ಲಿಂದು ಕಲ್ಯಾಣ ಕರ್ನಾಟಕ ಸರ್ವ ಸಮಾಜಗಳ ಒಕ್ಕೂಟ ದ ವತಿಯಿಂದ ಭಾರಿ ಮೌನ ಪ್ರತಿಭಟನೆ ನಡೆಸಲಾಯಿತು ನಗರದ ಗಾಂಧಿಗಂಜ್ ಬಸವೇಶ್ವರ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿ ತಹಸಿಲ್ದಾರ ಮೇಲೆ ಹಲ್ಲೆ ಖಂಡಿಸಿ, ದಾಳಿ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸ್ವಾಮೀಜಿಗಳು,ಮಠಾಧೀಶರು ಹಲವಾರು ಸಂಘಟನೆಯ ಪದಾಧಿಕಾರಿಗಳು ಭಾಗಿಯಾಗಿದ್ದರು. ಮೆರವಣಿಗೆ ನಂತರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರಿಗೆ ಮನವಿ ಸಲ್ಲಿಕೆ.

ಯಾವುದೇ ಅಹಿತಕರ ಘಟನೆಗಳು ನಡೆಯದ ಹಾಗೆ ಪೊಲೀಸ್ ಇಲಾಖೆ ಮೆರವಣಿಗೆ ಸುತ್ತ ಮುತ್ತ ಪೊಲೀಸ್ ಬೀಗಿಬಂದೋಬಸ್ತ ವಹಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಿಶೋರ್ ಬಾಬು ಹಾಗು ಡಿವೈಸ್ ಪಿ ಸತೀಶ್ ನೇತೃತ್ವ ವಹಿಸಿದ್ದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

1 COMMENT

Comments are closed.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group