spot_img
spot_img

ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಅವರು ತಾಲೂಕಿನ  ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ ಮಾಡನಾಡಿ, ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ದೆ ಮಾಡಬೇಕಾಗಿರುವದರಿಂದ ಅವರಿಗೆ ಕಂಪ್ಯೂಟರ್ ಸ್ಮಾರ್ಟ್ ಕ್ಲಾಸ್ ಪೀಠೋಪಕರಣಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವದು ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಶಕ್ತಿ ಹೆಚ್ಚು ಮಾಡಬೇಕಾಗಿರುವದರಿಂದ ಕ್ಷೇತ್ರದ ಗ್ರಾಮೀಣ ಪ್ರದೇಶದ ಐದು ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಒಂದು ಸಾವಿರ ಡೆಸ್ಕ್ ಕಂಪ್ಯೂಟರ್ ನೀಡಿ ಕಲಿಕಾ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಲಾಗುತ್ತದೆ. ಈ ನಿಟ್ಟಿನಲ್ಲಿ ಇವತ್ತು ಐದು ಶಾಲೆಗಳಲ್ಲಿ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಬಹುತೇಕ ಈ ಯೋಜನೆ ಯಶಸ್ವಿಯಾಗಿದೆ ಮುಂದಿನ ದಿನಗಳಲ್ಲಿ ಎಲ್ಲಾ ಶಾಲೆಗಳಿಗೂ ವಿಸ್ತರಿಸುವ ಯೋಜನೆಯಿದೆ ಎಂದ ಅವರು ತುಕ್ಕಾನಟ್ಟಿಯ ಸರ್ಕಾರಿ ಶಾಲೆಯ ಪ್ರಗತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು.

- Advertisement -

ಬಿಇಒ ಅಜಿತ್ ಮನ್ನಿಕೇರಿ ಮಾತನಾಡಿ, ವಲಯದ ಐದು ಸರ್ಕಾರಿ ಶಾಲೆಗಳಿಗೆ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿಯವರು ಗ್ರಾಮೀಣಮಟ್ಟದ ವಿದ್ಯಾರ್ಥಿಗಳ ಶಿಕ್ಷಣ ಸುಧಾರಿಸುವ ನಿಟ್ಟಿನಲ್ಲಿ ಸಂಸದರ ಪ್ರಧೇಶಾಭಿವೃದ್ಧಿ ನಿಧಿಯಲ್ಲಿ ಸ್ಮಾರ್ಟ್ ಕ್ಲಾಸ್‍ಗಳನ್ನು ಹಾಗೂ ಪೀಠೋಪಕರಣಗಳನ್ನು ನೀಡಿರುವದರಿಂದ ಈ ಶಾಲೆಗಳ ಶಿಕ್ಷಕರು ಅವುಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ ಮಕ್ಕಳ ಪ್ರಗತಿಗೆ ಶ್ರಮಿಸಬೇಕೆಂದು ಹೇಳಿದರು.

ಪ್ರಧಾನಗುರು ಎ.ವ್ಹಿ.ಗಿರೆಣ್ಣವರ ಸರ್ಕಾರಿ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದಕ್ಕಾಗಿ ಸಂಸದರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಯಲ್ಲವ್ವ ಬಿಳಿಗೌಡ್ರ, ಸಿ.ಆರ್.ಪಿ. ಜಿ.ಕೆ.ಉಪ್ಪಾರ. ಪ್ರಧಾನ ಗುರು ಎ.ವ್ಹಿ.ಗಿರೆಣ್ಣವರ, ಪುಂಡಲೀಕ ಅರಬಾಂವಿ, ಬಸವರಾಜ ಹುಲಕುಂದ, ರವಿ ಗದಾಡಿ, ಭೀಮಶಿ ಬಂಡ್ರೋಳಿ, ಬಸು ಖಾನಗೌಡ್ರ, ಹಣಮಂತ ಗದಾಡಿ, ಭೀಮಶಿ ಕಂಕಣವಾಡಿ, ಪ್ರಕಾಶ ಅರಬಾಂವಿ, ಹನಮಂತ ಹುಲಕುಂದ, ಪಿರಾಜ ಗದಾಡಿ, ನಾಗಪ್ಪ ಹಾದಿಮನಿ, ಸಿದ್ದಪ್ಪ ಗದಾಡಿ ಹಾಗೂ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಬಿಜೆಪಿ ಮಂಡಲ ನೂತನ ಪದಾಧಿಕಾರಿಗಳಿಗೆ ಸನ್ಮಾನ

ಸಿಂದಗಿ: ಪಟ್ಟಣದ ವೈಷ್ಣವಿ ಹೋಟೆಲಿನಲ್ಲಿ ಸಿದ್ದು ಗೌಡ ಪಾಟೀಲ್ ಇವರ ಪರಿವಾರ ವತಿಯಿಂದ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳಿಗೆ  ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ...
- Advertisement -

More Articles Like This

- Advertisement -
close
error: Content is protected !!
Join WhatsApp Group