spot_img
spot_img

ಅರಭಾವಿ ಕ್ಷೇತ್ರದ ಚುನಾವಣಾ ಸೆಕ್ಟರ್ ಅಧಿಕಾರಿಗಳ ಸಭೆ

Must Read

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ೨೦೨೩ ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೆಕ್ಟರ್ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು.

ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ  ಚುನಾವಣೆಯ ನಿಮಿತ್ತ ಅರಭಾವಿ ಮತ ಕ್ಷೇತ್ರದಲ್ಲಿ ೨೮೧ ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅರಭಾವಿ ಮತ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳಿಗೆ ಖುದ್ದಾಗಿ ಪರೀಶಿಲಿಸಿ ವರದಿ ಸಲ್ಲಿಸಬೇಕೆಂದು ಹೇಳಿದರು.

ಸಭೆಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳಾದ ತಾ.ಪಂ ಇ.ಒ ಎಫ್.ಜಿ.ಚಿನ್ನನವರ, ಬಿಇಒ ಅಜಿತ ಮನ್ನಿಕೇರಿ, ಸಿಡಿಪಿ ಯಲ್ಲಪ್ಪ ಗದಾಡಿ, ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಸಿ.ಬಿ.ಪಾಟೀಲ, ಗ್ರೇಡ್ ಟು ತಹಶೀಲ್ದಾರ ಶಿವಾನಂದ ಬಬಲಿ, ಚುನಾವಣಾ ಶಿರಸ್ತೆದಾರ ಪಿ.ಕೆ.ನಾಯ್ಕ,  ಚುನಾವಣೆ ವಿಷಯ ನಿರ್ವಹಕ ಪಿ.ಎಸ್.ಕುಂಬಾರ ಹಾಗೂ ೨೦ ಜನ ಚುನಾವಣಾ ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!