ಮಾಜಿ ದೇವದಾಸಿಯರ ಮರು ಸಮೀಕ್ಷೆ ಸಮಿತಿ ಸಭೆ

Must Read

ಮೂಡಲಗಿ: ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ 2025ರ ತಾಲೂಕ ಮಟ್ಟದ ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಿತಿ ಸಭೆಯು ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸೋಮವಾರದಂದು ಜರುಗಿತು.

ಸಮಿತಿಯ ಅಧ್ಯಕ್ಷ ಹಾಗೂ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಮಾತನಾಡಿ, ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆ. 15ರಿಂದ 45 ದಿನಗಳವರೆಗೆ ನಡೆಸಲಾಗುತ್ತಿದ್ದು. ಸಮೀಕ್ಷೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಡಲಗಿ ರವರ ಕಚೇರಿಯಲ್ಲಿ ನಡೆಸಲಾಗುತ್ತಿದ್ದು ಎಲ್ಲ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬದವರು ಸೂಕ್ತ ದಾಖಲಾತಿಗಳೊಂದಿಗೆ ಬಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಮೂಡಲಗಿಯಲ್ಲಿ ಮಾಹಿತಿ ನೀಡಬೇಕೆಂದು ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಪ್ಪ ಗದಾಡಿ ಮಾತನಾಡಿ ಸಮೀಕ್ಷೆ ಬಗ್ಗೆ ಪೂರ್ಣಣ ಮಾಹಿತಿ ನೀಡಿದರು. ಇದೇ ವೇಳೆ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಕುರಿತು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್ ಜಿ ಚಿನ್ನಣ್ಣನವರ, ಬಿಇಒ ಪ್ರಕಾಶ ಹಿರೇಮಠ, ಹಾಗೂ ಹೋರಾಟಗಾರ ಈರಪ್ಪ ಢವಳೇಶ್ವರ ಹಾಗೂ ದೇವದಾಸಿ ಮಹಿಳೆಯರ ಪುನರ್ವಸತಿ ಕಲ್ಪಿಸುವಲ್ಲಿ ಕೆಲಸ ಮಾಡುತ್ತಿರುವ ಸಂಸ್ಥೆಯವರು ಹಾಗೂ ಫಲಾನುಭವಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group