spot_img
spot_img

ವಿಧಾನ ಪರಿಷತ್ ಚುನಾವಣೆ; ಅರಭಾವಿ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದ ಟೀಂ ಎನ್‍ಎಸ್‍ಎಫ್

Must Read

ಮೂಡಲಗಿ: ಜೂನ್ 13 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆ ನಿಮಿತ್ತ ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಕ್ಷೇತ್ರಾದ್ಯಂತ ಅವರ ಆಪ್ತ ಸಹಾಯಕರುಗಳು ಹಾಗೂ ಪಕ್ಷದ ಪದಾಧಿಕಾರಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಚನ್ನಮಲ್ಲಿಕಾರ್ಜುನ ಯಕ್ಷಂಬಿ ಮತ್ತು ದಾಸಪ್ಪ ನಾಯಿಕ ಅವರು ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಮತಯಾಚಿಸಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ಅರುಣ ಶಹಾಪೂರ ಮತ್ತು ಪದವೀಧರ ಕ್ಷೇತ್ರದಿಂದ ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ ಆಯ್ಕೆ ಮಾಡುವಂತೆ ಇದೇ ಸಂದರ್ಭದಲ್ಲಿ ಅವರು ಕೋರಿಕೊಂಡಿದ್ದಾರೆ.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಮಹಾಂತೇಶ ಕುಡಚಿ, ಪರಸಪ್ಪ ಬಬಲಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳಾದ ತಮ್ಮಣ್ಣ ದೇವರ, ಪ್ರಮೋದ ನುಗ್ಗಾನಟ್ಟಿ, ಸಂಗಣ್ಣ ಕಂಟಿಕಾರ, ಇಕ್ಬಾಲ್ ಸರ್ಕಾವಸ್, ವಾಸಂತಿ ತೇರದಾಳ, ನಾಗರಾಜ ಕುದರಿ, ಯಲ್ಲಾಲಿಂಗ ವಾಳದ, ಹಾಗೂ ಮುಖಂಡರಾದ ಮುತ್ತೆಪ್ಪ ಕುಳ್ಳೂರ, ಹನಮಂತ ತೇರದಾಳ, ರವಿ ಪರುಶೆಟ್ಟಿ, ಸಂಜಯ ಹೊಸಕೋಟಿ, ವಿಠ್ಠಲ ಪಾಟೀಲ, ಶಿವು ಕಮತಿ, ನ್ಯಾಯವಾದಿ ಅಡಿವೆಪ್ಪ ಬಿಲಕುಂದಿ, ಮುತ್ತೆಪ್ಪ ಮನ್ನಾಪೂರ, ಮುಂತಾದವರು ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

- Advertisement -
- Advertisement -

Latest News

ಈಗಿನಿಂದಲೇ ತಟ್ಟಿದ ಚುನಾವಣೆಯ ಬಿಸಿ

ಬೀದರನ ಭಾಲ್ಕಿಯಲ್ಲಿ ತಂದೆ - ಮಗನ ವಿಭಿನ್ನ ಹೋರಾಟ ಬೀದರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ  ಹತ್ತಿರ ಬರುತ್ತಿದ್ದಂತೆ ಜಿಲ್ಲೆಯ  ಭಾಲ್ಕಿ ಕ್ಷೇತ್ರವು ಎರಡು ರೀತಿಯ ಪ್ರಕರಣಗಳಿಂದ ಸುದ್ದಿಗೆ...
- Advertisement -

More Articles Like This

- Advertisement -
close
error: Content is protected !!