- Advertisement -
ಬೀದರ – ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಗ್ರಾಮದ ವಿಶ್ವ ಗುರು ಬಸವಣ್ಣನವರ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.
ಇದನ್ನು ಕಂಡ ಸಾವಿರಾರು ಬಸವ ಅಭಿಮಾನಿಗಳು ಭಾಲ್ಕಿ ಹುಮನಾಬಾದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಸ್ತೆಗೆ ಅಡ್ಡವಾಗಿ ಬೈಕ್ ಹಚ್ಚಿ ರಸ್ತೆ ತಡೆದರು. ಸ್ಥಳದಲ್ಲಿ ಹೆಚ್ಚಿನ ಜನರು ಸೇರುತ್ತಿದ್ದಂತೆ ಪೊಲೀಸರು ಆಗಮಿಸಿ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಿದರು.
ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಪ್ರತಿಭಟನಾಕಾರರು ಪೊಲೀಸರನ್ನು ಒತ್ತಾಯಿಸಿದರು. ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
ವರದಿ : ನಂದಕುಮಾರ ಕರಂಜೆ, ಬೀದರ