spot_img
spot_img

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ

ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

- Advertisement -

ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ 20 ನಿಮಿಷಗಳ ಕಾಲ ದೂರವಾಣಿ ಮೂಲಕ ಮಾತನಾಡಿ ತಮ್ಮ ಬೆಂಬಲ ಘೋಷಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ ನಿಜಕ್ಕೂ ಪ್ರಶಂಸನೀಯ. ಈ ಸಂಬಂಧ ಕಳೆದ ವರ್ಷ ಸಂಕ್ರಾಂತಿ ಹಬ್ಬದ ದಿನದಂದು ಸ್ವಾಮಿಗಳ ಸಾರಥ್ಯದಲ್ಲಿ ಪಂಚಮಸಾಲಿ ಸಮಾಜವು ಅನೇಕ ಹೋರಾಟಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಕೂಡಲಸಂಗಮದಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಮೇಲೆ ಹಕ್ಕೊತ್ತಾಯವನ್ನು ಮಂಡಿಸಿದ್ದಾರೆ. ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ನೀಡಬೇಕೆನ್ನುವುದು ನನ್ನದು ಕೂಡ ಕಳಕಳಿಯ ಮನವಿಯಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ ಸಮಾಜಕ್ಕೆ ಅಗತ್ಯವಿರುವ ಮೀಸಲಾತಿಗಾಗಿ ನಾನು ಕೂಡ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

- Advertisement -

ಒಕ್ಕಲುತನವನ್ನೇ ಮೂಲ ಬಂಡವಾಳವನ್ನಾಗಿ ತೆಗೆದುಕೊಂಡಿರುವ ಈ ಸಮಾಜ ಸರಳ ಮತ್ತು ಸ್ವಾಭಿಮಾನಿಗಳು. ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ಸಮಾಜದವರು ಮಾಡುತ್ತಿರುವ ಹೋರಾಟವನ್ನು ನಾವೆಲ್ಲರೂ ಬೆಂಬಲಿಸೋಣ. ಜಯ ಮೃತ್ಯುಂಜಯ ಸ್ವಾಮಿಗಳ ಹೆಗಲಿಗೆ ಹೆಗಲು ಕೊಟ್ಟು ಒಗ್ಗಟ್ಟಾಗಿ ಹೋರಾಡೋಣ. ಸಮಾಜದ ಒಳತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೂಡಲ ಸಂಗಮ ಸ್ವಾಮಿಗಳ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿರುವ ಅವರು, ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಬರುವ ದಿನಾಂಕ 7 ರಂದು ನಡೆಯುವ ಪಂಚಮಸಾಲಿ ಸಮಾಜದ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group