ರಣಾಂಗಣವಾದ ಬೀದರ್ ತ್ರೈಮಾಸಿಕ ಕೆಡಿಪಿ ಸಭೆ..!ಎಂಎಲ್ಎ-ಎಂಎಲ್ಸಿ ಗಳ ಬಡಿದಾಟ…

Must Read

ಬೀದರ್ ‌ನಗರದ ಜಿಲ್ಲಾ ಪಂಚಾಯತ್ ಸಭಾಂಗಣದ ಕೆಡಿಪಿ ಸಭೆಯಲ್ಲಿ ಶಾಸಕ ಸಿದ್ದು ಪಾಟೀಲ ಹಾಗೂ ಎಂಎಲ್ ಸಿ ಭೀಮರಾವ್ ಪರಸ್ಪರ ಕೈಮಿಲಾಯಿಸಿ ಹೊಡೆದಾಟಕ್ಕೆ ಇಳಿದಿದ್ದರಿಂದ ಕೆಡಿಪಿ ಸಭೆ ರಣಾಂಗಣವಾಗಿ ಪರಿವರ್ತನೆಯಾಯಿತು.

ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಇಬ್ಬರು ಎಂಎಲ್ಸಿ ಭೀಮರಾವ್ ಪಾಟೀಲ್, ಚಂದ್ರಶೇಖರ್ ನಡುವೆ .ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ವಾಗ್ವಾದ ನಡೆಯಿತು.

ಸಚಿವ ಈಶ್ವರ ಖಂಡ್ರೆಯವರು ಕೂಡ ಸಭೆಯಲ್ಲಿ ಹಾಜರಿದ್ದರು. ಈ ವೇಳೆ ಕೈ ಕೈ ಮಿಲಾಯಿಸಿದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್ಸಿ ಭೀಮರಾವ್ ಪಾಟೀಲ್ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡರು

ಮೂವರನ್ನು ಸಮಾಧಾನಪಡಿಸಲು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹರಸಾಹಸ ಪಡಬೇಕಾಯಿತು. ಕೊನೆಗೆ ಸಭೆಯನ್ನು ಸಚಿವರು ಮುಂದಕ್ಕೆ ಹಾಕಿದರು.

ಸಭೆಯಲ್ಲಿ ಸಚಿವ ರಹೀಂ ಖಾನ್, ಡಿಸಿ ಶಿಲ್ಪಾ ಶರ್ಮಾ ಹಾಗೂ ಸಿಇಓ ಗಿರೀಶ್ ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group