ಹುನಗುಂದ: ಹುನಗುಂದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿಎಪಿಸಿಎಂಎಸ್) ಚುನಾವಣೆಯಲ್ಲಿ 12-ಸ್ಥಾನಕ್ಕೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕ ವಿಜಯಾನಂದ ಎಸ್. ಕಾಶಪ್ಪನವರ ಅವರು ನೂತನ ನಿರ್ದೇಶಕರನ್ನು ಅವರ ಇಲಕಲ್ಲಿನ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು.
ಹಾಗೆಯೇ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜೈನಸಾಬ ಹಗೇದಾಳ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ದೊಡ್ಡಪ್ಪ ದಂಡಿನ ಅವರನ್ನೂ ಸತ್ಕರಿಸಿದರು.
ಇದೇ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿ ಅವರನ್ನು ಗೌರವಿಸಿದರು.
ಮುಖಂಡರಾದ ಮುತ್ತಣ್ಣ ಕಲಗೋಡಿ, ಸಂಗಮೇಶ ಚೂರಿ, ನೀಲಪ್ಪ ತಪೇಲಿ, ಮಲ್ಲಣ್ಣ ಹೂಗಾರ ಉಪಸ್ಥಿತರಿದ್ದರು.