spot_img
spot_img

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ರಮೇಶ ಭೂಸನೂರ ಚಾಲನೆ

Must Read

spot_img

ಸಿಂದಗಿ: ಕ್ರೀಡೆಗಳಲ್ಲಿ ಸೋಲು ಗೆಲವು ಮುಖ್ಯವಲ್ಲ ನಿರ್ಣಾಯಕರ ನೀಡುವ ತೀರ್ಪಿಗೆ ತಲೆಬಾಗಿ ಕ್ರೀಡೆಗಳಲ್ಲಿ ಬಾಗವಹಿಸಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡ 2022-23ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕೇಂದ್ರದ ಸಭೆಯಲ್ಲಿ ರಾಜ್ಯದಿಂದ 8 ಪ್ರಸ್ತಾವನೆಗಳು ಹೋಗಿದ್ದು ಅದರಲ್ಲಿ ವಿಜಯಪುರ ಜಿಲ್ಲೆಯ ಪ್ರಸ್ತಾವನೆಯು ಕೂಡಾ ಒಂದು ಅವುಗಳ ಅವಲೋಕನವಾದರೆ ಈ ಕ್ರೀಡಾಂಗಣಕ್ಕೆ ರೂ 8 ಕೋಟಿ ಮಂಜೂರಾಗಲಿದೆ ಜೇವರ್ಗಿಯಲ್ಲಿದ್ದ ಕ್ರೀಡಾಂಗಣದಂತೆ ಇದು ಕೂಡಾ ನಿರ್ಮಾಣವಾಗುತ್ತದೆ. ಹೆಚ್ಚು ಹೆಚ್ಚು ಕ್ರೀಡೆಗಳನ್ನು ಪ್ರೋತ್ಸಾಹಿಸುವಂತ ಕೆಲಸವಾಗಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಪುರಷ್ಕøತ ಯೋಜನೆಯಡಿ ಕ್ರಮ ಜರುಗಿಸಲಾಗುವುದು ಎಂದರು.

ಆಗ್ರಹ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಜಿಲ್ಲಾಡಳಿತ, ಜಿಲ್ಲಾಪಂಚಾಯತ, ತಾಲೂಕಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮಕ್ಕೆ ಬಾರದೇ ಇದ್ದು ಕ್ರೀಡಾ ಪಟುಗಳಿಗೆ ಅಗೌರವ ತೋರಿದ್ದಾರೆ ಕಾರಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವೇದಿಕೆಯಲ್ಲಿ ಅವಲೋಕಿಸಿ ಶಿಸ್ತಿನ ಕ್ರಮ ಜರುಗಿಸಬೇಕು ಎಂದು ಕ್ರೀಡಾಭಿಮಾನಿಗಳು ಆಗ್ರಹಿಸಿದ್ದಾರೆ.

ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ, ಉಪಾಧ್ಯಕ್ಷ ಹಾಸೀಂ ಆಳಂದ, ಸದಸ್ಯ ಶ್ರೀಶೈಲ ಬೀರಗೊಂಡ, ದೈಹಿಕ ಸಿಕ್ಷಣ ಪರಿವಿಕ್ಷಕ ಎಸ್ ಎಸ್.ಕೆರಿಗೊಂಡ ಸೇರಿದಂತೆ ದೈಹಿಕ ಶಿಕ್ಷಕರು ಇದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!