spot_img
spot_img

ಅಧಿಕಾರಿಗಳು ಕುಡಿಯುವ ನೀರಿನ ಬವಣೆ ತಪ್ಪಿಸಲು ಶಾಸಕರ ಸೂಚನೆ

Must Read

- Advertisement -

ಮೂಡಲಗಿ, ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಡಿಯುವ ನೀರಿನ ಹಾಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್‍ಡಿಪಿಆರ್ ಇಂಜನೀಯರ್‍ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರದಂದು ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಟಾಸ್ಕ್‍ಫೋರ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ತಿಂಗಳಿನಿಂದ ಮೇ-ತಿಂಗಳಿನವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಈಗಿನಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

- Advertisement -

ಅರಭಾವಿ ಮತಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇಲ್ಲಿಯತನಕ ಉದ್ಭವಿಸಿಲ್ಲ. ಕೆಲವೊಂದು ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆಗಳು ಇರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಜಾಗೃತರಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಕೆಲವೊಂದು ಗ್ರಾಮಗಳಲ್ಲಿ ಉದ್ಭವಿಸುತ್ತಿರುವ ನೀರಿನ ಸಮಸ್ಯೆಯನ್ನು ಸ್ಥಳೀಯ ಮಟ್ಟದ ಅಧಿಕಾರಿಗಳು ಪರಿಹರಿಸಬೇಕು. ಖಾಸಗಿ ಬೋರವೆಲ್‍ಗಳನ್ನು ಗುರುತಿಸಿ ಸಾರ್ವಜನಿಕರಿಗೆ ನೀರಿನ ಅನುಕೂಲತೆಗಳನ್ನು ಕಲ್ಪಿಸಿಕೊಡಬೇಕು. ಅಗತ್ಯ ಬಿದ್ದರೆ ಟ್ಯಾಂಕರಗಳಿಂದ ಕುಡಿಯುವ ನೀರನ್ನು ಸರಬುರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚನೆ ನೀಡಿದರು.

ಈಗಾಗಲೇ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಟ್ಯಾಂಕರಗಳು ಇದ್ದು, ಆ ಮೂಲಕ ನೀರನ್ನು ಸಾರ್ವಜನಿಕರ ಕೋರಿಕೆ ಮೇರೆಗೆ ಪೂರೈಸಬೇಕು. ಖಾಸಗಿ ಬೋರವೆಲ್‍ಗಳಿಗೆ ಮಾಸಿಕವಾಗಿ ಗರಿಷ್ಠ 15 ಸಾವಿರ ರೂಗಳ ತನಕ ಬಾಡಿಗೆ ನೀಡಲು ನಿರ್ಧರಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಅಷ್ಟೇನೂ ಇಲ್ಲದಿರುವುದರಿಂದ ಇಲ್ಲಿಯ ವರೆಗೆ ಟ್ಯಾಂಕರ್‍ಗಳಿಗೆ ಯಾರೂ ಟೆಂಡರ್ ಹಾಕಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಸಾರ್ವಜನಿಕರಿಗೆ ಯಾವುದೇ ತಾಪತ್ರಯ ಬಾರದಂತೆ ಕೆಲಸ ನಿರ್ವಹಿಸಲು ಅವರು ಅಧಿಕಾರಿಗಳಿಗೆ  ಸೂಚಿಸಿದರು.

ಜೆಜೆಎಮ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಪ್ರತಿ ಮನೆ-ಮನೆಗೆ ನಳದ ಸಂಪರ್ಕವನ್ನು ಕಲ್ಪಿಸಿಕೊಡಬೇಕು. ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ಅರಭಾವಿ ಕ್ಷೇತ್ರದ ರೈತರಿಗೆ ವಿತರಿಸಲಾಗುತ್ತಿದೆ. ತಿಗಡಿ-ತಳಕಟ್ನಾಳ ಶಾಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಬೋರವೆಲ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕು. ಈಗಾಗಲೇ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳನ್ನು ಮಾರ್ಚ ತಿಂಗಳೊಳಗೆ ಪೂರ್ಣಗೊಳಿಸಬೇಕು. ತಾಲೂಕುಗಳು ಬರಗಾಲ ಘೋಷಣೆಯಾಗಿದ್ದರಿಂದ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.

- Advertisement -

ಮೂಡಲಗಿ ತಹಶೀಲದಾರ ಮಹಾದೇವ ಸನ್ಮೂರಿ, ಗೋಕಾಕ ತಹಶೀಲದಾರ ಡಾ: ಮೋಹನ ಭಸ್ಮೆ, ಮೂಡಲಗಿ ತಾ.ಪಂ ಇಓ ನವೀನಪ್ರಸಾದ ಕಟ್ಟಿಮನಿ, ಗೋಕಾಕ ತಾ.ಪಂ ಇಓ, ಉದಯಕುಮಾರ ಕಾಂಬಳೆ, ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಯಾರವನು ನೀನೆಂದು ಜನ‌ ನಿನ್ನ ಕೇಳಿದರೆ ಆ ಪ್ರಶ್ನೆಗುತ್ತರವ ಹೀಗೆ ಹೇಳು ಕ್ರಿಸ್ತನವ ಕೃಷ್ಣನವ ಬುದ್ಧನವ ಬಸವನವ ಎಲ್ಲರವ ನಾನೆನ್ನು‌- ಎಮ್ಮೆತಮ್ಮ ಶಬ್ಧಾರ್ಥ ಯಾರವನು = ಯಾವ ಕುಲಜಾತಿಮತಪಂಥಕ್ಕೆ ಸೇರಿದವನು ತಾತ್ಪರ್ಯ ಜನಗಳು ನಿನ್ನ ಕುಲ‌...
- Advertisement -

More Articles Like This

- Advertisement -
close
error: Content is protected !!
Join WhatsApp Group