ಮತ್ತೊಮ್ಮೆ ಮೋದಿ ಅಧಿಕಾರಕ್ಕೆ -ಬಾಲಚಂದ್ರ ಜಾರಕಿಹೊಳಿ

Must Read

ಗೋಕಾಕ – ಯಶಸ್ವಿ ಮೂರನೇ ಬಾರಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,  ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ  ನಮ್ಮ ದೇಶದ ಜನರು ಬಿಜೆಪಿ ಪರವಾಗಿ ಐತಿಹಾಸಿಕ ತೀರ್ಪು ನೀಡಿದ್ದಾರೆ. ಮೋದಿಯವರ ಸಮರ್ಥ ಆಡಳಿತಕ್ಕೆ ಇಡೀ ರಾಷ್ಟ್ರವೇ ಫೀದಾ ಆಗಿದೆ ಎಂದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಭರ್ಜರಿಯಾಗಿ ಜಯಗಳಿಸಿದ್ದು, ನಮ್ಮ ಜಿಲ್ಲೆಯ ಎಲ್ಲ ಮುಖಂಡರು ಒಂದಾಗಿ- ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಗದೀಶ್ ಶೆಟ್ಟರ್ ಜಯಗಳಿಸಿದ್ದಾರೆ. ಮತ ನೀಡಿ ಆಶೀರ್ವದಿಸಿದ ಸಮಸ್ತ ಮತದಾರರು, ಗೆಲುವಿಗೆ ದುಡಿದಿರುವ ಎಲ್ಲ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುವೆ ಎಂದು ಅವರು ತಿಳಿಸಿದ್ದಾರೆ.

Latest News

ಖಂಡ್ರೆ ವಿರುದ್ಧ ಮಾತನಾಡಿದರೆ ನಾಲಿಗೆ ಕತ್ತರಿಸುವೆ – ಕಾಂಗ್ರೆಸ್ ಕಾರ್ಯಕರ್ತನ ವಿಡಿಯೋ

ಬೀದರ - ನಗರದ ಪಾಪನಾಶ ಶಿವಲಿಂಗ ‌ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ಇತ್ತೀಚೆಗೆ ಭಗವಂತ ಖೂಬಾ v/s ಖಂಡ್ರೆ ಟಾಕ್‌ವಾರ್ ನಡೆದ ಘಟನೆ ಇನ್ನೂ ಹಸಿರಾಗಿದೆಈ ಹಿನ್ನೆಲೆಯಲ್ಲಿ...

More Articles Like This

error: Content is protected !!
Join WhatsApp Group