spot_img
spot_img

ರೈತರು ಸಬಲ, ಸಮೃದ್ಧರಾಗಬೇಕೆಂಬುದು ಮೋದಿ ಸರ್ಕಾರದ ಆಶಯ – ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 60 ಸಾವಿರ ರೈತರ ಬ್ಯಾಂಕ ಖಾತೆಗಳಿಗೆ 112.10 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ ಇದು ಮೋದಿ ಸರ್ಕಾರದ ಗ್ಯಾರಂಟಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘಿಸಿದ್ದಾರೆ.

ಬುಧವಾರ ಫೆ. 28 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ ಭಾಗವಾಗಿ ದೇಶದ 9 ಕೋಟಿಗೂ ಅಧಿಕ ರೈತರಿಗೆ 21,000 ಕೋಟಿ ರೂ ಸೇರಿದಂತೆ ರಾಜ್ಯದ 48.61 ಲಕ್ಷ ರೈತರ ಖಾತೆಗೆ 972.26 ಕೋಟಿ ರೂಪಾಯಿ ನೇರವಾಗಿ ಫಲಾನುಭವಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದಾರೆ. ಇದು ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಗಳಲ್ಲಿ ಒಂದಾಗಿದೆ ಎಂದರು.

ಕಳೆದ 10 ವರ್ಷಗಳಲ್ಲಿ ಕೃಷಿ ಬಜೆಟ್ 5 ಪಟ್ಟು ಹೆಚ್ಚಳವಾಗಿದೆ. ಪ್ರಧಾನ ಮಂತ್ರಿ ಫಸಲ ಭಿಮಾ ಯೋಜನೆಯಡಿ 16 ಕೋಟಿಗೂ ಹೆಚ್ಚಿನ ರೈತರಿಗೆ ರೂ.1.56 ಲಕ್ಷ ಕೋಟಿ ರೂ. ಪಾವತಿಸಲಾಗಿದೆ. 2 ಲಕ್ಷಕ್ಕೂ ಅಧಿಕ ಪ್ರಧಾನ ಮಂತ್ರಿ ಕಿಸಾನ್ ಸಮೃದ್ದಿ ಕೇಂದ್ರಗಳ ಸ್ಥಾಪನೆಯಾಗಿವೆ. ಇ-ನಾಮ್ ಪೋರ್ಟಲ್ ನಲ್ಲಿ ಸುಮಾರು 1.77 ಕೋಟಿ ರೈತರು ಹಾಗೂ 1389 ಇ-ನಾಮ್ ಮಾರುಕಟ್ಟೆಗಳ ನೊಂದಣಿಯಾಗಿವೆ. ಮೋದಿ ಸರ್ಕಾರ ರೈತರು ಸಬಲರಾಗಬೇಕು ಮತ್ತು ಸಮೃದ್ದರಾಗಬೇಕು ಎನ್ನುವ ಕಳಕಳಿಯನ್ನು ಹೊಂದಿದ್ದು, ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರಲ್ಲದೇ ದೇಶದ ಬೆನ್ನೆಲುಬಾಗಿರುವ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಸದಾ ಕಾಲ ಇರಲಿದೆ ಎಂದು ಸಂಸದ ಈರಣ್ಣ ಕಡಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group