spot_img
spot_img

ಕೊನೆಗೂ ಉದ್ಘಾಟನೆಗೆ ಸಜ್ಜಾದ ಮೂಡಲಗಿ ಸಬ್ ರಿಜಿಸ್ಟ್ರಾರ್ ಕಚೇರಿ

Must Read

ಕಂದಾಯ ಸಚಿವರಿಂದ ದಿ.೨೦ ರಂದು ಉದ್ಘಾಟನೆ

ಮೂಡಲಗಿ: ತಾಲೂಕಿನ ಜನರ ಬಹು ದಿನಗಳ ನಿರೀಕ್ಷೆಯ ನೂತನ ಉಪ ನೋಂದಣಾಧಿಕಾರಿಗಳ ( ಸಬ್ ರಿಜಿಸ್ಟ್ರಾರ್) ಕಚೇರಿಯು ದಿ. ೨೦ ರಂದು ಸಾಯಂಕಾಲ ೫ ಗಂಟೆಗೆ ಇಲ್ಲಿನ ತಹಶೀಲ್ದಾರ ಕಚೇರಿ ಆವರಣದ ಕಟ್ಟಡದಲ್ಲಿ ಉದ್ಘಾಟನೆಯಾಗಲಿದೆ.

ಉದ್ಘಾಟನೆಯನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಕಂದಾಯ ಸಚಿವ ಆರ್. ಅಶೋಕ ನೆರವೇರಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಅರಭಾವಿ ಶಾಸಕ ಹಾಗೂ ಕೆಎಮ್ಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸಲಿದ್ದಾರೆ.

ವಿಶೇಷ ಆಮಂತ್ರಿತರಾಗಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಅತೀಕ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಮೋಹನರಾಜ್ ಕೆ ಪಿ, ಉತ್ತರ ವಲಯದ ಆರಕ್ಷಕ ಮಹಾ ನಿರೀಕ್ಷಕ ಎನ್. ಸತೀಶ ಕುಮಾರ್, ನೋಂದಣಿ ಮಹಾ ಪರಿ ವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಮಮತಾ ಬಿ ಆರ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ ಎಚ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಎಮ್. ಪಾಟೀಲ, ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ ಜಿ ಮಹಾತ್ ಇವರೆಲ್ಲ ಆಗಮಿಸಲಿದ್ದಾರೆ.

ಅಲ್ಲದೆ ಗೌರವಾನ್ವಿತ ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ಶಾಸಕ ಸತೀಶ ಜಾರಕಿಹೊಳಿ, ಶಾಸಕ ರಮೇಶ ಜಾರಕಿಹೊಳಿ, ಮೂಡಲಗಿ ಪುರಸಭಾ ಅಧ್ಯಕ್ಷ ಹಣಮಂತ ಗುಡ್ಲಮನಿ ಸೇರಿದಂತೆ ಅನೇಕ ಸಂಸದರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಆಗಮಿಸಲಿದ್ದಾರೆ.

ಉಪನೋಂದಣಿ ಕಚೇರಿಯ ಉದ್ಘಾಟನಾ ಸಮಾರಂಭಕ್ಕೆ ಸಕಲರೂ ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ, ಗೋಕಾಕ ಉಪನೋಂದಣಿ ಅಧಿಕಾರಿ ಸದಾಶಿವ ಡಬ್ಬಗೋಳ ಹಾಗೂ ಮೂಡಲಗಿ ಉಪ ನೋಂದಣಿ ಅಧಿಕಾರಿ ಹರಿಯಪ್ಪ ಒ. ಅವರು ಜಂಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

- Advertisement -
- Advertisement -

Latest News

ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ

ಬೆಳಗಾವಿ: ಮಕ್ಕಳಿಲ್ಲದ ಬಡ ದಂಪತಿಗಳಿಗೆ ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ ಕೊಡಿಸಲು ಕೊಲ್ಲಾಪುರದ ಸಿದ್ಧಗಿರಿ ಮಠದ ದತ್ತಿ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮುಜರಾಯಿ,...
- Advertisement -

More Articles Like This

- Advertisement -
close
error: Content is protected !!