spot_img
spot_img

ಶೆಟ್ಟರ ಆಯ್ಕೆಯಾದರೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗುತ್ತದೆ – ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆ ಆದರೆ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ. ಆಗ ನಾವು ಕೇಂದ್ರದ ಅನೇಕ ಯೋಜನೆಗಳನ್ನು ಹಾಗೂ ಅನೇಕ ಮಹತ್ವದ ಕೆಲಸಗಳನ್ನು ನಮ್ಮ ಕ್ಷೇತ್ರಕ್ಕಾಗಿ ಮಾಡಿಸಬಹುದು. ಹಾಗಾಗಿ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

ಬುಧವಾರದಂದು ಲೋಕಸಭಾ ಚುನಾವಣೆಯ ಅಂಗವಾಗಿ ಅರಭಾವಿ ಮತಕ್ಷೇತ್ರದ ಮೆಳವಂಕಿ, ಕೌಜಲಗಿ ಗ್ರಾಮಗಳಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಏನೇ ಹೇಳಿದರೂ ನೀವು ಬಿಜೆಪಿಗೆ ಮತ ನೀಡಬೇಕು. ಬರಗಾಲದ ಸಂದರ್ಭದಲ್ಲೂ ನಮ್ಮ ಕ್ಷೇತ್ರದಲ್ಲಿ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸಲಾಗಿದೆ. ಮುಂದಿನ ಹತ್ತು ದಿನಗಳ ಕಾಲ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸಲಾಗುವುದು. ಬೇರೆ ಬೇರೆ ಅಭಿವೃಧ್ಧಿ ಕೆಲಸಗಳು ಸಾಕಷ್ಟು ಆಗಿದೆ. ಮುಂದೆ ಕೂಡಾ ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು. ನಮ್ಮ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರು ಅನೋನ್ಯವಾಗಿ ಇದ್ದೇವೆ. ಬಸವಣ್ಣನವರು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟದಂತೆ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ಒಂದಾಗಿ ಇದ್ದೇವೆ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮಾತನಾಡಿ, ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅರಭಾವಿ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಿದೆ. ಸಾವಿರಾರು ಕೋಟಿ ಅನುದಾನ ತಂದು ಕ್ಷೇತ್ರವನ್ನು ರಾಜ್ಯದಲ್ಲಿ ಆದರ್ಶ ಕ್ಷೇತ್ರವನ್ನಾಗಿ ಮಾಡಿದ್ದಾರೆ. ನನಗೆ ರಾಜಕೀಯವಾಗಿ 30 ವರ್ಷಗಳ ಅನುಭವ ಇದೆ. ಹಾಗಾಗಿ ಯುವಕರಿಗೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಕೃಷಿಗೆ ಸಂಬಂಧಿಸಿದ ಅನೇಕ ಬಲದಲಾವಣೆ ಮಾಡೋಣ. ಎಲ್ಲೇ ನೋಡಿದರೂ ಬೆಳಗಾವಿ ಹೆಸರು ಬರಬೇಕು, ಆ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಯುವಕರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತೇವೆ. ಬೆಳಗಾವಿಯಲ್ಲಿ ಜವಳಿ ಪಾರ್ಕ ನಿರ್ಮಿಸುತ್ತೇನೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ ಅವರು, ನಮ್ಮ ಎನ್‍ಡಿಎ ಈಗಾಗಲೇ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಆದರೆ ಆಯ್‍ಎನ್‍ಡಿಆಯ್‍ಎ ಒಕ್ಕೂಟವು ಪ್ರಧಾನಿ ಅಭ್ಯರ್ಥಿಯನ್ನು ಏಕೆ ಘೋಷಿಸಿಲ್ಲ? ಸೋಲಿನ ಭೀತಿ ಆ ಪಕ್ಷವನ್ನು ಆವರಿಸಿದೆ ಎಂದು ಹೇಳಿದರು.

- Advertisement -

ಮಾಜಿ ವಿಪ ಸದಸ್ಯ ಮಹಾಂತೇಶ್ ಕವಟಗಿಮಠ ಮಾತನಾಡಿ, ಮಾ. 7 ನಡೆಯುವ ಚುನಾವಣೆ ಐತಿಹಾಸಿಕ ಚುನಾವಣೆ, ದೇಶದ ನಾಯಕತ್ವ ನಿರ್ಧರಿಸುವ ಚುನಾವಣೆ ಆಗಿದೆ. ಕಳೆದ 10 ವರ್ಷದಲ್ಲಿ ನರೇಂದ್ರ ಮೋದಿಯವರು ವಿವಿಧ ಜನಪರ ಯೋಜನೆಗಳನ್ನು ನೀಡಿ, ನಾವು ಸ್ವಾಭಿಮಾನದಿಂದ ಬದುಕಲು ಕೆಲಸ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಇಡಿ ವಿಶ್ವ ತತ್ತರಿಸಿತು. ನಾವು ಒಟ್ಟಾಗಿ ಕೋವಿಡ್ ಎದುರಿಸಲು ಸಂಕಲ್ಪ ಮಾಡಿ, ಎಲ್ಲರಿಗೂ ಕೋವಿಡ್ ಲಸಿಕೆ ನೀಡಿದ್ದಾರೆ. ಬೆಳಗಾವಿಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಮೂಡಲಗಿ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ಲೀಡ್ ನೀಡಬೇಕು. ಜಗದೀಶ್ ಶೆಟ್ಟರ್ ಆಯ್ಕೆ ಮಾಡುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಾಯಕತ್ವವನ್ನು ಗಟ್ಟಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ್, ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಕಾಳಶೆಟ್ಟಿ, ಮಹಾಂತೇಶ ಕುಡಚಿ, ಮುತ್ತೇಪ್ಪ ಮನ್ನಾಪೂರ ಸೇರಿದಂತೆ ಅರಭಾವಿ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶ್ರೀನಿವಾಸ ಶಾಲೆಯ ಆಡಳಿತ ಮಂಡಳಿ ಬದಲಾಗುವುದಿಲ್ಲ – ಅಧ್ಯಕ್ಷ ರಂಗಣ್ಣ ಸೋನವಾಲಕರ

ಮೂಡಲಗಿ - ಶ್ರೀನಿವಾಸ ಶಾಲೆಯನ್ನು ಬೇರೆಯವರಿಗೆ ಮಾರುತ್ತಿದ್ದಾರೆ, ಆಡಳಿತ ಮಂಡಳಿ ಬದಲಾಗುತ್ತದೆ ಎಂಬ ವದಂತಿ ಹರಡಿದ್ದು ಅದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ಶ್ರೀನಿವಾಸ ಸ್ಕೂಲ್ಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group