Homeಸುದ್ದಿಗಳುಹತ್ತು ಲಕ್ಷಕ್ಕೂ ಹೆಚ್ಚು ಆಸ್ತಿ ಡಿಜಿಟಲೀಕರಣವಾಗಿದೆ - ಈರಣ್ಣ ಕಡಾಡಿ

ಹತ್ತು ಲಕ್ಷಕ್ಕೂ ಹೆಚ್ಚು ಆಸ್ತಿ ಡಿಜಿಟಲೀಕರಣವಾಗಿದೆ – ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಇದುವರೆಗೆ 10,10,845 ಆಸ್ತಿಗಳನ್ನು ಡಿಜಿಟಲ್‌ ರೂಪದಲ್ಲಿ ದಾಖಲಾಗಿಸಿದೆ ಎಂದು ಕೇಂದ್ರ ಪಂಚಾಯತ್‌ ರಾಜ್‌ ಇಲಾಖೆ ರಾಜ್ಯ ಸಚಿವ ಪ್ರೊ. ಎಸ್.ಪಿ. ಸಿಂಗ್‌ ಬಘೇಲ್‌ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಇದುವರೆಗೆ ಸರ್ಕಾರದಿಂದ ವಿತರಿಸಲಾದ ಆಸ್ತಿ ಕಾರ್ಡ್‌ಗಳ ಮಾಹಿತಿ ಕುರಿತು ಕೇಳಿದ ಪ್ರಶ್ನಗೆ ಉತ್ತರಿಸಿದ ಸಚಿವರು ಸ್ವಾಮಿತ್ವ ಯೋಜನೆಯಡಿ ರಾಜ್ಯದ 31 ಜಿಲ್ಲೆಗಳ 30,715 ಗ್ರಾಮಗಳನ್ನು ಒಳಗೊಂಡಿದೆ. ಇಲ್ಲಿಯವರೆಗೆ 18,571 ಗ್ರಾಮಗಳಲ್ಲಿ ಡ್ರೋನ್ ಸಮೀಕ್ಷೆ ಪೂರ್ಣಗೊಂಡಿದೆ ಮತ್ತು ಆಸ್ತಿಗಳ ಪರಿಶೀಲನೆಯನ್ನು ವೇಗಗೊಳಿಸಲು ರಾಜ್ಯವು ರೋವರ್‌ಗಳನ್ನು ಸಹ ಬಳಸುತ್ತಿದೆ ಎಂದರು.

ಗ್ರಾಮೀಣ ಭಾರತದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸುವ ದೃಷ್ಟಿಕೋನದಿಂದ ಪ್ರಧಾನ ಮಂತ್ರಿಯವರು ಸ್ವಾಮಿತ್ವ ಯೋಜನೆಯನ್ನು ಪ್ರಾರಂಭಿಸಿದರು. ಹಳ್ಳಿಗಳಲ್ಲಿ ಜನವಸತಿ ಪ್ರದೇಶಗಳಲ್ಲಿ ಮನೆ ಹೊಂದಿರುವ ಮನೆಗಳಿಗೆ ಸಮೀಕ್ಷೆಗಾಗಿ ಇತ್ತೀಚಿನ ಡ್ರೋನ್ ತಂತ್ರಜ್ಞಾನದ ಮೂಲಕ ‘ಹಕ್ಕುಗಳ ದಾಖಲೆ’ಯನ್ನು ಒದಗಿಸುವುದು ಇದರ ಉದ್ದೇಶವಾಗಿದೆ. ಈ ಯೋಜನೆಯು ಆಸ್ತಿಗಳ ಹಣಗಳಿಕೆಯನ್ನು ಸುಗಮಗೊಳಿಸಲು ಮತ್ತು ಬ್ಯಾಂಕ್ ಸಾಲಗಳ ಮೂಲಕ ಸಾಂಸ್ಥಿಕ ಸಾಲವನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತದೆ. ಆಸ್ತಿ ಸಂಬಂಧಿತ ವಿವಾದಗಳನ್ನು ಕಡಿಮೆ ಮಾಡುತ್ತದೆ, ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ತೆರಿಗೆಯ ಉತ್ತಮ ಮೌಲ್ಯಮಾಪನವನ್ನು ಸುಗಮಗೊಳಿಸುತ್ತದೆ ಹಾಗೂ ಸಮಗ್ರ ಗ್ರಾಮ ಮಟ್ಟದ ಯೋಜನೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group