ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಕಾರ್ಯಾಗಾರ

Must Read

ತುಮಕೂರು – ತುಮಕೂರು ಜಿಲ್ಲೆಯ ಎಲ್ಲಾ 53 ವಸತಿ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು ತುಮಕೂರು ಇವರ ನಿರ್ದೇಶನದಂತೆ  ಹಾಗೂ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರ ಸಹಕಾರದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಹಾಗೂ ಹೆಚ್ಚು ಅಂಕವನ್ನು ಗಳಿಸಲು ಸಹಕಾರಿಯಾಗುವಂತೆ ಜಿಲ್ಲಾಮಟ್ಟದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಗೂಗಲ್ ಮೀಟ್ ಮುಖೇನ  ಸಮಾಜ ವಿಜ್ಞಾನ ವಿಷಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿಜಗುಣಯ್ಯ ಹೆಚ್ಎಸ್ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಎಂ ಆರ್ ಪಿ ಸಮಾಜ ವಿಜ್ಞಾನ ಡಾ ಬಿಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ನೊಣವಿನಕೆರೆ ತಿಪಟೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಈ ಕಾರ್ಯಾಗಾರವನ್ನ ನಡೆಸಲಾಯಿತು.

ಈ ಕಾರ್ಯಾಗಾರದಲ್ಲಿ ಎಲ್ಲಾ 53 ವಸತಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಮಾಜ ವಿಜ್ಞಾನ  ಶಿಕ್ಷಕರು ಪಾಲ್ಗೊಂಡು ಸಂದೇಹಗಳನ್ನ ನಿವಾರಣೆ ಮಾಡಿಕೊಂಡು ಈ ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಈ ಕಾರ್ಯಾಗಾರ ಬಹಳ ಉಪಯುಕ್ತವಾಗಿದೆ ಅತ್ಯಂತ ಪರಿಣಾಮಕಾರಿಯಾಗಿತ್ತು. ಒಟ್ಟಿನಲ್ಲಿ  ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿ ಅತಿ ಹೆಚ್ಚು ಅಂಕ ಗಳಿಸಲು ಸಹಕಾರಿಯಾಗಿದೆ ಎಂಬ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.

ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ತುಮಕೂರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು ತುಮಕೂರು ಇವರ ನಿರ್ದೇಶನದಲ್ಲಿ ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಈ ಸಮಾಜ ವಿಜ್ಞಾನ ಪ್ರೇರಣಾ ಕಾರ್ಯಾಗಾರ ಹಮ್ಮಿಕೊಂಡಿದ್ದು ಪರೀಕ್ಷಾ  ಸಮಯದಲ್ಲಿ ಅತ್ಯಂತ ಉಪಯುಕ್ತವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group