spot_img
spot_img

ಬೆಳಗಾವಿ ಜಿಲ್ಲೆಗೆ ಮಹತ್ವದ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ಈರಣ್ಣ ಕಡಾಡಿ ಮನವಿ

Must Read

- Advertisement -

ಮೂಡಲಗಿ: ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದ್ದು, ಮೂರು ರಾಜ್ಯಗಳ ವ್ಯವಹಾರಕ್ಕೆ ಬೆಳಗಾವಿ ನಗರ ಸೂಕ್ತ ಸ್ಥಳವಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಿಂದ ಮಹಾರಾಷ್ಟ್ರ ಗಡಿಯ ನಿಪ್ಪಾಣಿಯವರೆಗೆ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-04ರ ಅಕ್ಕ-ಪಕ್ಕದಲ್ಲಿ, ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆ ಮಾಡುವ ಕುರಿತು ಬಹಳ ದಿನಗಳಿಂದ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಸಂಸದ ಈರಣ್ಣ ಕಡಾಡಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.

ಸೋಮವಾರ ಫೆ-07 ರಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಳಗಾವಿ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಉತ್ಪಾದಿಸುವ ಉತ್ಪನ್ನಗಳು ದೇಶದ ವಿವಿಧ ರಾಜ್ಯಗಳಿಗೆ ರಫ್ತಾಗುತ್ತವೆ. ಆದರೆ ಸರಕು ಸಾಗಣೆಯ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣದಿಂದ, ಉದ್ಯಮಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪ್ರಸಕ್ತ ವರ್ಷದ ಕೇಂದ್ರ ಬಜೆಟ್‍ನಲ್ಲಿ ದೇಶದ ಒಟ್ಟು 20 ಕಡೆಗಳಲ್ಲಿ ಮಲ್ಟಿಮೋಡ್ ಲಾಜಿಸ್ಟಿಕ್ ಹಬ್ ನಿರ್ಮಿಸುವ ಕುರಿತು ಪ್ರಸ್ತಾಪವಾಗಿದ್ದು, ಬೆಳಗಾವಿ ಜಿಲ್ಲೆಯ ಉದ್ಯಮಿಗಳ ಸರಕು ಸಾಗಾಣೆಯನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಲ್ಟಿಮೋಡ್ ಲಾಜಿಸ್ಟಿಕ್ ಹಬ್ ನಿರ್ಮಾಣಕ್ಕೆ ಅಗತ್ಯಕ್ರಮ ವಹಿಸಲು ಕೋರಲಾಗಿದೆ ಎಂದರು.

- Advertisement -

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕಾರ್ಗೋ ಟರ್ಮಿನಲ್ ನಿರ್ಮಾಣದ ಬೇಡಿಕೆಯಿದ್ದು, ಕೇಂದ್ರ ಸರ್ಕಾರ ಕಿಸಾನ್ ಏರ್ ಕಾರ್ಗೋ -2′ ಯೋಜನೆಯ ಮೊದಲ ಹಂತದಲ್ಲಿ ದೇಶದ 53 ವಿಮಾನ ನಿಲ್ದಾಣಗಳಲ್ಲಿ ನಿರ್ಮಿಸುವ ಗುರಿ ಹೊಂದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಈ ಯೋಜನೆಯ ಅನುಷ್ಠಾನಕ್ಕಾಗಿ, ಕೇಂದ್ರ ವಿಮಾನಯಾನ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಪ್ರಯಾಣಿಕರ ಸಂಖ್ಯೆ ಗಣನೀಯವಾಗಿದೆ. ವಿಮಾನ ನಿಲ್ದಾಣದ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವುದರಿಂದ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ಮಾರ್ಗವನ್ನು ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸರ್ಕಾರವು ಅಗತ್ಯಕ್ರಮ ಕೈಗೊಳ್ಳಬೇಕಾಗಿದೆ.

ಬೆಳಗಾವಿ ಜಿಲ್ಲೆಯು ಮೂರು ಜಿಲ್ಲೆಗಳಿಗಾಗುವಷ್ಟು ಜನಸಂಖ್ಯೆ ಹೊಂದಿರುವ ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ ಗೋಕಾಕ ಅಥವಾ ಮೂಡಲಗಿ ತಾಲ್ಲೂಕಿನಲ್ಲಿ ಹೊಸ ಕೇಂದ್ರೀಯ ವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕಾದ ಅಗತ್ಯವಿದೆ. ಈ ಬಗ್ಗೆ ನಾನು ಕೂಡಾ ಪ್ರಯತ್ನಿಸುತ್ತಿದ್ದೇನೆ.ಬೆಳಗಾವಿ ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರ ಸಂಖ್ಯೆ ಒಂದು ಲಕ್ಷಕ್ಕೂ ಮಿಗಿಲಾಗಿದ್ದು, ಸದರಿ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ನಗರದ ಉದ್ಯಮ ಭಾಗದಲ್ಲಿ ನೂರು ಬೆಡ್‍ಗಳ ಇಎಸ್‍ಆಯ್‍ಸಿ ಆಸ್ಪತ್ರೆಯ ಮಂಜೂರಾತಿಗಾಗಿ, ನಾವು ಈಗಾಗಲೇ ಪ್ರಯತ್ನ ಮಾಡುತ್ತಿದ್ದು ತಾವುಗಳು ಕೂಡ ಈ ಬಗ್ಗೆ ಕೇಂದ್ರ ಕಾರ್ಮಿಕ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ವಹಿಸಬೇಕಾಗಿದೆ. ಈ ಮಹತ್ವದ ಯೋಜನೆಗಳ ಜಾರಿಗೆ ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.

- Advertisement -

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ ಜೋಶಿ, ರಾಜೀವ ಚಂದ್ರಶೇಖರ, ಎ ನಾರಾಯಣಸ್ವಾಮಿ, ಭಗವಂತ ಖೂಬಾ ಸೇರಿದಂತೆ ಸಂಸದರು, ಅಧಿಕಾರಿಗಳು ಇದ್ದರು.

- Advertisement -
- Advertisement -

Latest News

ಉಚಿತ ಕಣ್ಣು ತಪಾಸನೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ

ಸಿಂದಗಿ; ಪೂಜ್ಯ ಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಸಿಂದಗಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಹಾಗೂ ಅನುಗ್ರಹ ವಿಜನ್ ಫೌಂಡೇಶನ್ ಟ್ರಸ್ಟ್, ವಿಜಯಪುರ, ಜಿ.ಪಿ. ಪೋರವಾಲ...
- Advertisement -

More Articles Like This

- Advertisement -
close
error: Content is protected !!
Join WhatsApp Group