ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮದ ಶ್ರೀ ಡಿ. ಎಸ್. ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದ್ದು ಕಾಲೇಜಿನ ಫಲಿತಾಂಶ 98.43% ರಷ್ಟು ದಾಖಲಾಗಿದೆ.
ಕುಮಾರಿ – ಸೌಮ್ಯ ಗೌರ 569/600 ಪ್ರಥಮ ಸ್ಥಾನ, ಕುಮಾರಿ – ಶಶಿಕಲಾ ಮಂಗೊಂಡಿ -568/600 ದ್ವಿತೀಯ ಸ್ಥಾನ, ಕುಮಾರಿ – ಪ್ರೀಯಾ ಸುಂಟ್ಯಾಣ 557/600 ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನಲ್ಲಿ ಒಟ್ಟು 64 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು ಅದರಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆ ಹೊಂದ್ದಿದ್ದಾರೆ. ಅದರಲ್ಲಿ 32 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), ಮತ್ತು 31 ವಿದ್ಯಾರ್ಥಿಗಳು ಉತ್ತಮ ಶ್ರೇಣಿ (ಪ್ರಥಮ ಶ್ರೇಣಿ)ಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಈ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಚಾರ್ಯರಾದ ಐ.ಡಿ.ಪಡಶೆಟ್ಟಿ ಹಾಗೂ ಉಪನ್ಯಾಸಕ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ