ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ದ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.
ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಕಾರ್ಯಕ್ರಮವನ್ನು ಮಾ.15ರ ಬದಲು 17ಕ್ಕೆ ಮುಂದೂಡಲಾಗಿದೆ ಮತ್ತು ಸಿದ್ದರಾಮಯ್ಯ ಅವರು ಮಾ.17ರಂದು ಮೂಡಲಗಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.