ಜನವರಿಯಲ್ಲಿ ಮೂಡಲಗಿ ಸಾಹಿತ್ಯ ಸಮ್ಮೇಳನ

Must Read

ಮೂಡಲಗಿ: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು, ಅನೇಕ ಸಾಹಿತಿಗಳು, ಕ್ಷೇತ್ರದ ಶಾಸಕರ ಸಲಹೆಯಂತೆ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಬರುವ ಜನವರಿ ತಿಂಗಳಲ್ಲಿ ಮೂಡಲಗಿ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಂಜಯ್ ಶಿಂಧೀಹಟ್ಟಿ ಹೇಳಿದರು.

ಪಟ್ಟಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿರಿಯ ಸಾಹಿತಿ, ರಂಗ ಕಲಾವಿದ ಹಾಗೂ ಬಹುಮುಖ ಪ್ರತಿಭೆಯಾದಂಥ ರೇ.ಭಾಸ್ಕರ್ ಸಣ್ಣಕ್ಕಿ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ, ಸಮ್ಮೇಳನಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಆದ್ದರಿಂದ ಬರುವ ದಿನಗಳಲ್ಲಿ ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳು, ತಾಲೂಕು ಆಡಳಿತ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರನ್ನು ಕರೆದು ಪೂರ್ವಭಾವಿ ಸಭೆ ನಡೆಸಿ ಸಮ್ಮೇಳನದ ರೂಪುರೇಷೆಯನ್ನು ರೂಪಿಸಲಾಗುತ್ತದೆ ಎಂದು ವಿವರಿಸಿದರು.

ಈ ಸಂಧರ್ಭದಲ್ಲಿ ಗೌರವ ಕಾರ್ಯದರ್ಶಿಗಳಾದ ಬಿ.ಆರ್.ತರಕಾರ, ಎ.ಎಚ್.ಒಂಟಗೋಡಿ, ಗೌರವ ಕೋಶಾಧ್ಯಕ್ಷ ಬಿ.ವಾಯ್.ಶಿವಾಪೂರ, ಹಿರಿಯ ಪದಾಧಿಕಾರಿ ವಿ.ಎಸ್.ಹಂಚಿನಾಳ ಹಾಗೂ ನಿಕಟಪೂರ್ವ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಉಪಸ್ಥಿತರಿದ್ದರು.

Latest News

ಸಿಂಡಿಕೇಟ್ ಸದಸ್ಯ ಜಗದೀಶ ಭೈರಮಟ್ಟಿಯವರಿಗೆ ಸನ್ಮಾನ

ಬಾಗಲಕೋಟೆ : ತಾಲೂಕಿನ ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘ ವಜ್ರಮಹೋತ್ಸವದ ಸಂಭ್ರಮಾಚರಣೆಯ ಹೊಸ್ತಿಲಲ್ಲಿ ಇದ್ದು ಸಂಸ್ಥೆಗೆ ಹಿರಿಮೆಯ ಗರಿ ಹೆಮ್ಮೆ ಎಂಬಂತೆ ಶ್ರೀ ಪರಪ್ಪ ಸಂಗಪ್ಪ...

More Articles Like This

error: Content is protected !!
Join WhatsApp Group