ಮೂಡಲಗಿಯ ಸರ್ಕಾರಿ ಪದವಿ ಕಾಲೇಜಿಗೆ ಪ್ರಥಮ ರ‍್ಯಾಂಕ್

Must Read

ಮೂಡಲಗಿ: -ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ಶಿಲ್ಪಾ ಪಾರಿಸ ಉಪ್ಪಿನ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ೧೩ನೇ ಘಟಿಕೋತ್ಸವದಲ್ಲಿ ಬಿ.ಎಸ್.ಡಬ್ಲೂ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ

ಅವರು ಘನತೆವೆತ್ತ ರಾಜ್ಯಪಾಲರಾದ  ಥಾವರಚಂದ ಗೆಹ್ಲೋತ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿ, ಮಹಾವಿದ್ಯಾಲಯದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ
ಸಚಿವರಾದ ಡಾ. ಎಮ್. ಸಿ. ಸುಧಾಕರ್ ಅವರು ಉಪಸ್ಥಿತರಿದ್ದರು.

ಸಮಾಜಕಾರ್ಯ ವಿಭಾಗದ ಎರಡನೆಯ ರ‍್ಯಾಂಕ್ ಸಹ ಮೂಡಲಗಿಯ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶಿಲ್ಪಾ ವಡಕಿ ಅವರು ಪಡೆಯುವ ಮೂಲಕ ಪ್ರಥಮ ಮೂರು ರ‍್ಯಾಂಕುಗಳಲ್ಲಿ ಎರಡು ರ‍್ಯಾಂಕುಗಳು ಮೂಡಲಗಿ ಕಾಲೇಜಿನ ಪಾಲಾಗಿವೆ.

ಬಿ. ಎ ವಿಭಾಗದಲ್ಲಿ ವಿದ್ಯಾರ್ಥಿನಿ ಕುಮಾರಿ ಅರ್ಪಿತಾ ಮಳವಾಡ ಅವರು ನಾಲ್ಕನೆಯ ರ‍್ಯಾಂಕ್ ಪಡೆಯುವ ಮೂಲಕ ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು ಮೂರು ರ‍್ಯಾಂಕುಗಳನ್ನು ಮೂಡಲಗಿಯ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಪಡೆದುಕೊಂಡಿರುವುದು ಶ್ಲಾಘನೀಯ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ,
ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸರ್ವ ಸದಸ್ಯರು,
ಪ್ರಾಂಶುಪಾಲರಾದ ಮಹೇಶ ಕಂಬಾರ, ಸಮಾಜಕಾರ್ಯ ಮತ್ತು ಕಲಾ ವಿಭಾಗದ ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group