ಮನೆಮನೆಗೆ ಲಸಿಕೆ ನೀಡು ಬಗ್ಗೆ ಮತ್ತೊಮ್ಮೆ ಚಿಂತಿಸಲು ಕೇಂದ್ರಕ್ಕೆ ಮುಂಬೈ ಹೈಕೋರ್ಟ್ ಸೂಚನೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...
ವೃದ್ಧರು ಹಾಗೂ ಅಂಗವಿಕಲರಿಗೆ ಮನೆಮನೆಗೆ ಹೋಗಿ ಕೊರೋನಾ ಲಸಿಕೆ ನೀಡುವುದನ್ನು ರದ್ದು ಮಾಡಿರುವ ತನ್ನ ನಿರ್ಧಾರದ ಬಗ್ಗೆ ಕೇಂದ್ರ ಮತ್ತೊಮ್ಮೆ ವಿಚಾರ ಮಾಡಬೇಕು ಎಂದು ಮುಂಬೈ ಹೈಕೋರ್ಟ್ ಕೇಂದ್ರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಂಕರ ದತ್ತಾ ಹಾಗೂ ಜಿ ಎಸ್ ಕುಲಕರ್ಣಿ ಅವರ ವಿಭಾಗೀಯ ಪೀಠವು ಈ ಸಲಹೆ ನೀಡಿದ್ದು ಕೇಂದ್ರ ನೀಡಿರುವ ಅಫಿಡವಿಟ್ ಬಗ್ಗೆ ವಿಚಾರಣೆ ನಡೆಸುತ್ತಿದೆ.
ಈ ಮಧ್ಯೆ ಕೇಂದ್ರ ಸರ್ಕಾರವು ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿದ್ದು ಅದರಲ್ಲಿ ವಯಸ್ಕರಿಗೆ ಹಾಗೂ ಅಂಗವಿಕಲರಿಗೆ ಮನೆಮನೆಗೆ ಕೋವಿಡ್ ಲಸಿಕೆ ನೀಡುವಲ್ಲಿ ಇರುವ ಐದು ತೊಂದರೆಗಳನ್ನು ಹೇಳಿಕೊಂಡಿದೆ.
  • ಲಸಿಕೆ ಹಾಕಿದ ನಂತರ ಉದ್ಭವಿಸಬಹುದಾದ  ಆರೋಗ್ಯ  ತೊಂದರೆಗಳನ್ನು ಗಮನಿಸಲು ತಡವಾಗಬಹುದು.
  • ಲಸಿಕೆ ಹಾಕಿದ ನಂತರ ಫಲಾನುಭವಿಯ ಮೇಲೆ ೩೦ ನಿಮಿಷ ನಿಗಾ ಇಡುವುದಕ್ಕೆ ತೊಂದರೆ ಉಂಟಾಗಬಹುದು
  • ಪ್ರತಿ ಲಸಿಕೆ ಹಾಕುವಾಗಲು ಅದನ್ನು ಹೊರಗೆ ತೆಗೆಯುವುದು ಹಾಕುವುದು ಮಾಡುವುದರಿಂದ ಅದಕ್ಕೆ ಹೊರಗಿನ ವಾತಾವರಣ ತಗುಲಿ ಸೋಂಕು ತಾಕಬಹುದು.
  • ಪ್ರತಿ ಮನೆ ಮನೆಯ ಬಾಗಿಲಿಗೆ ಹೋಗಿ ಲಸಿಕೆ ನೀಡುವುದರಿಂದ ಹೆಚ್ಚಿನ ಪ್ರಮಾಣದ ಲಸಿಕೆ ಪೋಲಾಗಬಹುದು.
  • ಮನೆ ಮನೆಗೆ ಲಸಿಕೆ ಹಾಕುವುದರಿಂದ ಸಾಮಾಜಿಕ ಅಂತರ ಹಾಗೂ ಸೋಂಕು ಹರಡುವುದನ್ನು ತಡೆಯುವುದು ಕಷ್ಟವಾಗಬಹುದು.
ಈ ರೀತಿಯ ಐದು ಕಾರಣಗಳನ್ನು ಕೇಂದ್ರ ಸರ್ಕಾರ ಕೋರ್ಟಿಗೆ ನೀಡಿದರೂ ಮನೆಮನೆಗೆ ಲಸಿಕೆ ವಿತರಣೆಯ ಬಗ್ಗೆ ಇನ್ನೊಮ್ಮೆ ವಿಚಾರ ಮಾಡಬೇಕು ಎಂದು ಸಲಹೆ ನೀಡಿದೆ.
- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!