ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ

Must Read

9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ

ಮೂಡಲಗಿ: ಇಲ್ಲಿಯ ಪುರಸಭೆ 9 ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.

ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ ಶಿವಬಸು ಮುನ್ಯಾಳ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಡಿ. 27 ರಂದು ನಡೆಯಬೇಕಿದ್ದ ಪುರಸಭೆಯ ಒಂದು ಸ್ಥಾನಕ್ಕೆ ಇಂದು ಅವಿರೋಧವಾಗಿ ಆಯ್ಕೆಯಾಗಿದೆ ಎಂದು ಚುನಾವಣಾಧಿಕಾರಿ ಎಂ.ಎಚ್. ಪೂಜೇರಿ ಪ್ರಕಟಿಸಿದರು.

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಇಂದು ಪುರಸಭೆಯ 9ನೇ ವಾರ್ಡಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಶಾಸಕರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ, ಬಿಜೆಪಿ ಪದಾಧಿಕಾರಿಗಳು, ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

ನಂತರ ಹೊಸ ಸದಸ್ಯರಾಗಿ ಆಯ್ಕೆಯಾದ ಈರಪ್ಪ ಮುನ್ಯಾಳ ಅವರನ್ನು ಚುನಾವಣಾಧಿಕಾರಿ ಪೂಜೇರಿ ಅವರು ಅಭಿನಂದಿಸಿದರು.

ಮೂಡಲಗಿ ಪುರಸಭೆಯ ಒಟ್ಟು ಸದಸ್ಯರ ಸಂಖ್ಯೆ 23 ಇದ್ದು, ಇದರಲ್ಲಿ ಈರಪ್ಪ ಶಿವಬಸು ಮುನ್ಯಾಳ ಅವರ ಆಯ್ಕೆಯಿಂದಾಗಿ ಪುರಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 12ಕ್ಕೆ ಏರಿದಂತಾಗಿದೆ. 6 ಜನ ಜೆಡಿಎಸ್ ಹಾಗೂ 5 ಜನ ಪಕ್ಷೇತರರು ಪುರಸಭೆಯಲ್ಲಿ ಸದಸ್ಯರಾಗಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group