ಸತೀಶ ಜಾರಕಿಹೊಳಿ ಪ್ರಚಾರ; ಅಭಿವೃದ್ಧಿಯೇ ನನ್ನ ಮೂಲ ಗುರಿ – ಸತೀಶ ಜಾರಕಿಹೊಳಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸವದತ್ತಿ : ತಾಲೂಕಿನ ಶಿರಸಂಗಿಯ ಶ್ರೀ ಕಾಳಿಕಾ ದೇವಸ್ಥಾನಕ್ಕೆ ಬೆಳಗಾವಿ ಲೋಕಸಭಾ ಚುನಾವಣಾ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡು ನಂತರ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಮಾತನಾಡಿ, ಬರುವ 17 ರಂದು ಜರಗುವ ಚುನಾವಣೆಯಲ್ಲಿ ನನಗೆ ಅತಿ ಹೆಚ್ಚು ಮತ ನೀಡುವುದರೊಂದಿಗೆ ಆಶೀರ್ವದಿಸಬೇಕು ಎಂದರು.

ಕಳೆದ 25 ವರ್ಷದ ಹಿಂದೆ ವಿಧಾನ ಪರಿಷತ್ ಸದಸ್ಯನಾಗಿ, 3 ಬಾರಿ ಯಮಕನಮರಡಿ ಶಾಸಕನಾಗಿ, ಬೆಳಗಾವಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯವನ್ನು ಮಾಡಿದ್ದೇನೆ. ನನ್ನ ಕಾರ್ಯವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಮಾಡಿದೆ ಜಿಲ್ಲೆಯ ಅಭಿವೃದ್ಧಿಯೇ ನನ್ನ ಮೂಲ ಗುರಿಯಾಗಿದೆ. ಸಿದ್ದರಾಮಯ್ಯನವರು ಕಳೆದ 5 ವರ್ಷದ ಹಿಂದೆ ನೀಡಿರುವ ಜನಪರ ಕಾರ್ಯಗಳನ್ನು ನೋಡಿ ನನಗೆ ಮತ ಚಲಾಯಿಸಿ ಎಂದರು.

ದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜನರ ಭಾವನೆ ಜೊತೆ ಆಟ ಆಡುತ್ತಿವೆ. ಪ್ರತಿನಿತ್ಯ ಗೃಹ ಬಳಕೆ ಸಾಮಗ್ರಿಯಾದ ಸಿಲಿಂಡರ್ ಹಾಗೂ ಗೊಬ್ಬರ, ಪೆಟ್ರೋಲ್ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗುತ್ತಿದ್ದಾರೆ. ನನ್ನ ಆಯ್ಕೆಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ತಕ್ಕ ಪಾಠವನ್ನು ಕಲಿಸಬೇಕು ಎಂದು ವಿನಂತಿಸಿದರು.

- Advertisement -

ಮಾಜಿ ಶಾಸಕ ಆರ್.ವಿ. ಪಾಟೀಲ, ಸವದತ್ತಿ ಕ್ರಾಂಗ್ರೆಸ್ ಮುಖಂಡರಾದ ವಿಶ್ವಾಸ ವೈದ್ಯ, ಪಂಚನಗೌಡ ದ್ಯಾಮನಗೌಡರ, ಸೌರಭ ಚೋಪ್ರಾ, ಜಿ.ಜಿ. ಕಣವಿ, ಮೈಬೂಬ ರಾಮದುರ್ಗ, ರವೀಂದ್ರ ಯಲಿಗಾರ, ಉಮೇಶ ಬಾಳಿ, ಎಚ್.ಆರ್. ಕುಂಬಾರ, ಮಲ್ಲು ಜಕಾತಿ, ಬಿ.ಎಸ್. ಪಾಟೀಲ, ಸ್ವಾತಿ ಮಾಳಗಿ, ಕೆ.ಬಿ. ಪಾಟೀಲ, ಕಲ್ಲಪ್ಪ ಗೋಡಿ, ಹನಮಂತ ಹೂಲಿ, ಶಿದ್ದಪ್ಪ ಸುಳ್ಳದ, ನಾಗರಾಜ ಭೋವಿ, ಪ್ರಕಾಶ ಧಡೆಮ್ಮನವರ, ಶ್ರೀನಿವಾಸ ಹೂಲಿ, ಯಲ್ಲಪ್ಪ ನಾಯ್ಕರ, ಅಪ್ಪು ಸಾವೋಜಿ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಆರತಿ ಮಾಡುವ ಮೂಲಕ ಸ್ವಾಗತಿಸಿದರು.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!