ಮೈಸೂರು-ಧಾರವಾಡ ರೈಲು ಇನ್ನು ಬೆಳಗಾವಿಯವರೆಗೆ – ಈರಣ್ಣ ಕಡಾಡಿ ಮಾಹಿತಿ

Must Read

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ  ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ.  ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು.

ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು  ಪ್ರಾರಂಭಿಸಲು ಅನುಮತಿ ನೀಡಿದ  ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುವುದಾಗಿ ಕಡಾಡಿ ಹೇಳಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group