ಮೈಸೂರು ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ, ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ

Must Read

ಮೈಸೂರು – ನಗರದ ಜಯಲಕ್ಷ್ಮೀ  ಪುರಂನಲ್ಲಿರುವ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ನ ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ದಿ. ೨೦ ರಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಹಪಠ್ಯೇತರ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮಕ್ಕೆ ಸಸಿಗೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ನ ಅಧ್ಯಕ್ಷರು ಹಾಗೂ ಮೈಸೂರು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಡಾ.ಜೆ.ಶಶಿಧರ್ ಪ್ರಸಾದ್ ರವರು ಮಾತನಾಡಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು ಗೆಲುವುಗಳಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಇರುತ್ತದೆ. ಅದನ್ನು ಹೊರಹಾಕಲು ಇಂತಹ ಸಾಂಸ್ಕೃತಿಕ ವೇದಿಕೆಗಳು ಸಹಕಾರಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವವನ್ನು ಬಿಟ್ಟು ಬಿಡಬೇಕು. ತಮ್ಮಲ್ಲಿ ಅಡಗಿರುವ ಕಲೆಗಳನ್ನು ಪ್ರದರ್ಶಿಸಲು ಮುಂದಾಗಬೇಕೆAದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ನಾಗಮ್ಮ ಎಂ.ಪಿ ವಹಿಸಿ ಮಾತನಾಡುತ್ತಾ, ಸಾಂಸ್ಕೃತಿಕ ಚಟುವಟಿಕೆಗಳಾದ ಸಾಹಿತ್ಯ, ಸಂಗೀತ, ಕಲೆ, ನೃತ್ಯ, ಕ್ರೀಡೆ ಸ್ಪರ್ಧೆಗಳು ವಿದ್ಯಾರ್ಥಿಗಳ ಪ್ರಗತಿಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಕ್ರಿಯಾಶೀಲತೆ ಹೊರಹಾಕಲು ಇವು ನೆರವಾಗುತ್ತವೆ. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಹೊಸತನ ನಿರ್ಮಿಸಬಹುದು. ವ್ಯಕ್ತಿತ್ವ ಬಲಪಡಿಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಯ ಮಾನಸಿಕ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನೆರವಾದರೇ, ದೈಹಿಕ ಚಟುವಟಿಕೆಯನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಪ್ರಮುಖವಾದುದ್ದು ಎಂದು ಅಭಿಪ್ರಾಯಿಸಿದರು.

ವೇದಿಕೆಯಲ್ಲಿ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ನ ಕಾರ್ಯದರ್ಶಿಗಳಾದ ಶಿವಸುಂದರ ಸತ್ಯೇಂದ್ರ, ಧರ್ಮದರ್ಶಿಗಳಾದ ರಮೇಶ್.ಜಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ವೆಂಕಟೇಶ ಉಪಸ್ಥಿತರಿದ್ದರು.

ಪದವಿಪೂರ್ವ ಹಂತದಲ್ಲಿ ನಡೆದ ಕಾರ್ಯಕ್ರಮದಲ್ಲಿ ೮೫ಕ್ಕೂ ಹೆಚ್ಚು ಪದವಿಪೂರ್ವ ಕಾಲೇಜುಗಳಿಂದ ೩೫೦ ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಾದ ಕನ್ನಡ, ಇಂಗ್ಲೀಷ್, ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆ, ಚಿತ್ರಕಲೆ, ಭಾವಗೀತೆ, ಜನಪದಗೀತೆ, ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಗಳು, ಏಕಪಾತ್ರ ಅಭಿನಯ, ರಸಪ್ರಶ್ನೆ, ಜಾನಪದ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಉಪನ್ಯಾಸಕ ಹೇಮಕುಮಾರ್ ಹೆಚ್.ಎಸ್ ನಿರೂಪಿಸಿದರೆ, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ವೆಂಕಟೇಶ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.

ಇಂಗ್ಲೀಷ್ ವಿಭಾಗದ ಉಪನ್ಯಾಸಕರಾದ ಶಿವಶಂಕರ ಬಿ.ಎಸ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಪ್ರಾಂಶುಪಾಲರಾದ ಸುದೀಪ್, ಡಾ.ಸಂತೋಷ್ ಚೊಕ್ಕಾಡಿ, ರಮಾನಂದ, ಉದಯ್‌ಕುಮಾರ್, ಸಿ.ಕೆ.ಅಶೋಕ್ ಕುಮಾರ್, ಹೆಚ್.ಎಸ್.ಸತ್ಯಪ್ರಸಾದ್, ನಂಜುಂಡಸ್ವಾಮಿ, ಚಂದ್ರಶೇಖರ್, ಹೆಚ್.ವಿ.ರಾಘವೇಂದ್ರ, ಎಂ.ಶಿವಸ್ವಾಮಿ, ಬಾಲಸುಬ್ರಮಣ್ಯಂ, ಹಿರಿಯ ಉಪನ್ಯಾಸಕರಾದ ಮಂಜೇಗೌಡ, ಕ್ಯಾತಮಾರನಹಳ್ಳಿ ಮಹೇಶ್, ಡಾ.ಕೆ.ಮಾಲತಿ, ಚಿಕ್ಕಮಾದು, ಮಾಧು ಉರುಫ್ ಸ್ವಾಮಿ ಹಾಗೂ ಇನ್ನೀತರ ಕಾಲೇಜಿನ ಉಪನ್ಯಾಸಕ ವೃಂದ ಹಾಜರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ ಮನುಗನಹಳ್ಳಿಯಲ್ಲಿರುವ ಆರಾಧನಾ ಪದವಿಪೂರ್ವ ಕಾಲೇಜು ಪಡೆದುಕೊಂಡಿತು.

LEAVE A REPLY

Please enter your comment!
Please enter your name here

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group